ಕರ್ನಾಟಕ

karnataka

ಮನೆಗೆ ನುಗ್ಗಿದ ಟ್ರಕ್.. ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರ ಸಾವು, ಐವರಿಗೆ ಗಾಯ

By

Published : Aug 16, 2022, 7:13 AM IST

ಮೈನ್‌ಪುರಿ ರಸ್ತೆಯಲ್ಲಿರುವ ಮನೆಯೊಂದಕ್ಕೆ ಟ್ರಕ್ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ

4 dead, 5 injured as truck rams into house
ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿ ನಾಲ್ವರ ಸಾವು, ಐವರಿಗೆ ಗಾಯ

ಮೈನ್‌ಪುರಿ, ಉತ್ತರಪ್ರದೇಶ: ಮೈನ್‌ಪುರಿ ಜಿಲ್ಲೆಯಲ್ಲಿ ಮನೆಗೆ ನುಗ್ಗಿದ ಟ್ರಕ್ ನಿಂದಾಗಿ ಪರಿಣಾಮ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ಇನ್ನೂ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಕುರವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಜಿಟಿ ರಸ್ತೆಯಲ್ಲಿರುವ ಖಿರಿಯಾ ಪೀಪಲ್ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದಿದ್ದರಿಂದ ಈ ಘಟನೆ ನಡೆದಿದೆ. ಈ ಬಗ್ಗೆ ಮಾತನಾಡಿರುವ ಮೈನ್‌ಪುರಿ ಎಸ್‌ಪಿ ಕಮಲೇಶ್ ದೀಕ್ಷಿತ್, ಮೈನ್‌ಪುರಿ ರಸ್ತೆಯಲ್ಲಿರುವ ಮನೆಯೊಂದಕ್ಕೆ ಟ್ರಕ್ ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ, ಐವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ದುರ್ಘಟನೆಯಲ್ಲಿ ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದಾರೆ. ಟ್ರಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ. ಒಬ್ಬರು ಇನ್ನೂ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎಸ್​​ಪಿ ಹೇಳಿದ್ದಾರೆ.

ಇದನ್ನು ಓದಿ:ಕಾಶ್ಮೀರದಲ್ಲಿ 2 ಕಡೆ ಉಗ್ರರಿಂದ ಗ್ರೆನೇಡ್ ದಾಳಿ ಓರ್ವ ಪೊಲೀಸ್​, ನಾಗರಿಕನಿಗೆ ಗಾಯ

ABOUT THE AUTHOR

...view details