ಕರ್ನಾಟಕ

karnataka

ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ: 7ನೇ ತರಗತಿ ವಿದ್ಯಾರ್ಥಿಗೆ ಗುಂಡು ಹಾರಿಸಿದ ಯುವಕ

By

Published : Nov 4, 2022, 7:36 PM IST

ಧೋಲ್ಪುರ್ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಮೊರೋಲಿ ಗ್ರಾಮದ ಸರ್ಕಾರಿ ಶಾಲೆಗೆ ಪ್ರವೇಶಿಸಿದ ಯುವಕನೊಬ್ಬ, 7ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗೆ ಗುಂಡು ಹಾರಿಸಿದ್ದಾನೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ
ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ

ಧೋಲ್ಪುರ್ (ರಾಜಸ್ಥಾನ):ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊರೋಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಶುಕ್ರವಾರ ಮಧ್ಯಾಹ್ನ ಯುವಕನೊಬ್ಬ ಶಾಲೆಯೊಳಗೆ ನುಗ್ಗಿ 7ನೇ ತರಗತಿ ವಿದ್ಯಾರ್ಥಿಗೆ ಗುಂಡು ಹಾರಿಸಿದ್ದಾನೆ. ಘಟನೆ ನಂತರ ಶಾಲಾ ಆವರಣದಲ್ಲಿ ಕಾಲ್ತುಳಿತ ಉಂಟಾಗಿದೆ.

ಸರ್ಕಾರಿ ಶಾಲೆಯಲ್ಲಿ ಗುಂಡಿನ ದಾಳಿ

ಗುಂಡು ಹಾರಿಸಿದ ನಂತರ ಭಯಭೀತನಾದ ಆರೋಪಿ ಯುವಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅದೇ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಗೊಂಡ ವಿದ್ಯಾರ್ಥಿಯನ್ನು ಕುಟುಂಬ ಸದಸ್ಯರೊಂದಿಗೆ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ವಿದ್ಯಾರ್ಥಿಯ ಹೇಳಿಕೆ ಪಡೆದು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿ ರಾಮ್​​ಹಾರಿ (16) ಹೇಳಿಕೆ ಪ್ರಕಾರ, ಆತ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ. ಗ್ರಾಮದ ಸಚಿನ್ ಅವರ ಪುತ್ರ ರಾಮಬರನ್ ಶಾಲೆಯೊಳಗೆ ಆಗಮಿಸಿ, ಪಿಸ್ತೂಲ್​ನಿಂದ ಗುಂಡು ಹಾರಿಸಿದ್ದಾನೆ. ಗುಂಡುಗಳು ವಿದ್ಯಾರ್ಥಿಯ ಮುಖ ಮತ್ತು ಕುತ್ತಿಗೆಗೆ ತಗುಲಿವೆ. ಅಪಘಾತದ ನಂತರ ಶಾಲೆಯ ಶಿಕ್ಷಕರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಹಾಡಹಗಲೇ ಶಿವಸೇನೆ ಹಿಂದೂಸ್ತಾನ್ ಮುಖ್ಯಸ್ಥನಿಗೆ ಗುಂಡಿಕ್ಕಿ ಕೊಲೆ

ಗಾಯಗೊಂಡ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ನಮೂನೆಯ ಹೇಳಿಕೆಯಲ್ಲಿ ವಿದ್ಯಾರ್ಥಿಯು ಈ ಘಟನೆಗೆ ಏನು ಕಾರಣ ಎಂದು ಹೇಳಿಲ್ಲ. ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಯನ್ನು ಬಂಧಿಸಲು ತಂಡವನ್ನು ರಚಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಪ್ರಭಾರಿ ಅನಿಲ್ ಜಸೋರಿಯಾ ಹೇಳಿದ್ದಾರೆ.

ABOUT THE AUTHOR

...view details