ಕರ್ನಾಟಕ

karnataka

ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: 9 ಶಿಕ್ಷಕರು, ಪ್ರಾಂಶುಪಾಲನ ವಿರುದ್ಧ ಕೇಸ್​​

By

Published : Dec 8, 2021, 7:28 PM IST

Updated : Dec 8, 2021, 7:43 PM IST

ರಾಜಸ್ಥಾನದ ಅಲ್ವಾರ್ ಸರ್ಕಾರಿ ಶಾಲೆಯೊಂದರಲ್ಲಿ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮತ್ತು ಕಿರುಕುಳ ನೀಡಿದ ಆರೋಪದಡಿ 9 ಮಂದಿ ಶಿಕ್ಷಕರು ಮತ್ತು ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಾಗಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಲ್ವಾರ್ (ರಾಜಸ್ಥಾನ):ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಶಾಲೆಯೊಂದರ 9 ಮಂದಿ ಶಿಕ್ಷಕರು ಮತ್ತು ಪ್ರಾಂಶುಪಾಲನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

ಸಂತ್ರಸ್ತೆಯೊಬ್ಬರ ತಂದೆ ಮಗಳು ಶಾಲೆಗೆ ಹೋಗದ ಕಾರಣವನ್ನು ವಿಚಾರಿಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕಿ 10ನೇ ತರಗತಿಯಲ್ಲಿ ಓದುತ್ತಿದ್ದು, ಕಳೆದ ಒಂದು ವರ್ಷದಿಂದ ಆಕೆಯ ಮೇಲೆ ಪ್ರಾಂಶುಪಾಲರು ಹಾಗು ಶಿಕ್ಷಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜತೆಗೆ ಇಬ್ಬರು ಶಿಕ್ಷಕಿಯರು ಈ ದುಷ್ಕೃತ್ಯದ ವಿಡಿಯೋಗಳನ್ನು ಚಿತ್ರೀಕರಿಸಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.

ಘಟನೆಯ ವಿವರ:

ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರು ಹಾಗು ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ಕರೆದು ಅಸಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿ ಬಾಲಕಿಯರ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಸಿದ ಸಂದರ್ಭದಲ್ಲಿ ಇನ್ನೂ ಮೂವರು ವಿದ್ಯಾರ್ಥಿನಿಯರು ಅತ್ಯಾಚಾರಕ್ಕೆ ಒಳಗಾಗಿರುವುದು ತಿಳಿದು ಬಂದಿದೆ. ಇವರು 6ನೇ ತರಗತಿ, 4ನೇ ತರಗತಿ ಮತ್ತು 3ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಾಗಿದ್ದಾರೆ. ಈ ಘಟನೆ ಕುರಿತು ಯಾರಿಗಾದರೂ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತ ಬಾಲಕಿಯರು ತಿಳಿಸಿದ್ದಾರೆ.

ತಮ್ಮ ಮೇಲೆ ಆಗುತ್ತಿರುವ ಅತ್ಯಾಚಾರದ ಬಗ್ಗೆ ಬಾಲಕಿಯರಲ್ಲಿ ಒಬ್ಬಳು, ಶಿಕ್ಷಕಿಗೆ ತಿಳಿಸಿದ್ದಳು. ಆದರೆ ಅವರು ಆ ಬಾಲಕಿಯರಿಗೆ ಶಾಲಾ ಶುಲ್ಕ ಮತ್ತು ಪುಸ್ತಕಗಳನ್ನು ನೀಡುವ ಆಮಿಷವೊಡ್ಡಿದ್ದರು. ಅಲ್ಲದೇ ದೂರು ನೀಡದಂತೆಯೂ ತಿಳಿಸಿದ್ದರು ಎನ್ನಲಾಗ್ತಿದೆ.

ಮಾನಹಾನಿ ಮಾಡಲು ಅನಗತ್ಯ ಷಡ್ಯಂತ್ರ:

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಂಶುಪಾಲರು ಹಾಗು ಶಿಕ್ಷಕರು ಅಂತಹ ಯಾವುದೇ ಘಟನೆ ನಡೆದಿಲ್ಲ. ಅನಗತ್ಯವಾಗಿ ನಮ್ಮ ಮಾನಹಾನಿ ಮಾಡಲಾಗುತ್ತಿದೆ. ಒಂದು ವರ್ಷದ ಹಿಂದೆ ಕೂಡ ಇದೇ ರೀತಿಯ ಪ್ರಕರಣ ಈ ಶಾಲೆಯಲ್ಲಿ ನಡೆದಿತ್ತು. ಅದಕ್ಕೆ ಸೇಡು ತೀರಿಸಿಕೊಳ್ಳಲು ಈ ಕಥೆಯನ್ನು ಹೆಣೆಯಲಾಗಿದೆ. ಪೊಲೀಸ್ ತನಿಖೆಯಲ್ಲಿ ಎಲ್ಲವೂ ಹೊರಬರಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಅಪ್ಪನ ವಿರುದ್ಧವೇ ಸಾಕ್ಷಿ ನುಡಿದ ಬಾಲಕ: ಕುಡಿದ ನಶೆಯಲ್ಲಿ ಪತ್ನಿ ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ

Last Updated : Dec 8, 2021, 7:43 PM IST

ABOUT THE AUTHOR

...view details