ಕರ್ನಾಟಕ

karnataka

ವಾರಾಣಸಿಯಲ್ಲಿ ಸಿಎಂ ಯೋಗಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

By

Published : Jun 26, 2022, 11:23 AM IST

Updated : Jun 26, 2022, 12:02 PM IST

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ವಾರಾಣಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Adityanath's helicopter emergency landed in Varanasi
ಸಿಎಂ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ವಾರಾಣಸಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಮುಖ್ಯಮಂತ್ರಿಯವರ ಹೆಲಿಕಾಪ್ಟರ್ ವಾರಾಣಸಿಯಿಂದ ಲಕ್ನೋಗೆ ಟೇಕ್ ಆಫ್ ಆದ ನಂತರ ಹಕ್ಕಿಯೊಂದು ಡಿಕ್ಕಿ ಹೊಡೆದಿದೆ. ಬಳಿಕ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲರಾಜ್ ಶರ್ಮಾ ತಿಳಿಸಿದರು. ಶನಿವಾರ ವಾರಾಣಸಿಗೆ ಆಗಮಿಸಿದ್ದ ಸಿಎಂ, ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ, ಬಳಿಕ ಪರಿಶೀಲನಾ ಸಭೆ ನಡೆಸಿದ್ದರು.

ಇದನ್ನೂ ಓದಿ:ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಮಾಜಿ ಗುಜರಾತ್ ಡಿಜಿಪಿ ಬಂಧನ

Last Updated : Jun 26, 2022, 12:02 PM IST

ABOUT THE AUTHOR

...view details