ಕರ್ನಾಟಕ

karnataka

ಮುಂದಿನ 100 ದಿನಗಳ ಕ್ರಿಯಾ ಯೋಜನೆ ರೂಪಿಸುವಂತೆ ಉನ್ನತ ಅಧಿಕಾರಿಗಳಿಗೆ ಯೋಗಿ ಸರ್ಕಾರದ ಸೂಚನೆ

By

Published : Mar 27, 2022, 7:02 PM IST

ಭ್ರಷ್ಟಾಚಾರ ಮತ್ತು ಆರ್ಥಿಕ ಅಪರಾಧಗಳ ವಿರುದ್ಧ ಪರಿಣಾಮಕಾರಿ ಕ್ರಮಕ್ಕಾಗಿ ಭ್ರಷ್ಟಾಚಾರ ತಡೆ ಸಂಸ್ಥೆ, ಆರ್ಥಿಕ ಅಪರಾಧಗಳ ಸಂಶೋಧನಾ ವಿಭಾಗ (ಇಒಡಬ್ಲ್ಯು), ವಿಜಿಲೆನ್ಸ್, ಎಸ್‌ಐಟಿ ಮತ್ತು ಸಿಬಿಸಿಐಡಿಯನ್ನು ಹೆಚ್ಚು ಶಕ್ತಿಯುತ ಮತ್ತು ಪರಿಣಾಮಕಾರಿಯಾಗಿ ಮಾಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ..

ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಸಿಎಂ ಆದ ಯೋಗಿ ಅದಿತ್ಯನಾಥ್
ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಸಿಎಂ ಆದ ಯೋಗಿ ಅದಿತ್ಯನಾಥ್

ಲಖನೌ: ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಯೋಗಿ ಆದಿತ್ಯನಾಥ್ ಅವರು ಮುಂದಿನ 100 ದಿನಗಳ ಸರ್ಕಾರದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಿಎಂ ನಿರ್ದೇಶನದ ಬಳಿಕ ಎಲ್ಲ ಇಲಾಖೆಗಳ ಮುಖ್ಯಸ್ಥರು ಕ್ರಿಯಾ ಯೋಜನೆ ರೂಪಿಸಲು ಚಿಂತನ-ಮಂಥನ ಆರಂಭಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವ್ನಿಶ್ ಅವಸ್ತಿ ಅವರ ಅಧ್ಯಕ್ಷತೆಯಲ್ಲಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ, ಉತ್ತರಪ್ರದೇಶದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಅಪರಾಧಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಭವಿಷ್ಯದ ಕಾರ್ಯತಂತ್ರದ ಕುರಿತು ಚಿಂತನ-ಮಂಥನ ನಡೆದಿದೆ ಎಂದು ತಿಳಿದು ಬಂದಿದೆ.

ವಿಡಿಯೋ ನೋಡಿ: 'ಕೆಜಿಎಫ್ ಚಾಪ್ಟರ್-2' ಟ್ರೈಲರ್ ಬಿಡುಗಡೆ ಕಾರ್ಯಕ್ರಮ: ನೇರಪ್ರಸಾರ

ಮೂಲಗಳ ಪ್ರಕಾರ, ಅವಸ್ತಿ ಅವರು ಪೊಲೀಸ್ ಇಲಾಖೆ ಮತ್ತು ಅದರ ಘಟಕಗಳು ಮತ್ತು ಜಿಲ್ಲಾ ಮಟ್ಟದಲ್ಲಿ ಪೊಲೀಸರನ್ನು ಯೋಜಿತ ರೀತಿಯಲ್ಲಿ ಬಲಿಷ್ಠ ಮತ್ತು ಪರಿಣಾಮಕಾರಿಯಾಗಿಸಲು ನಿರ್ದೇಶಿಸಿದ್ದಾರೆ ಎನ್ನಲಾಗಿದೆ. ಸಾಮಾನ್ಯ ಜನರಿಗೆ ಉತ್ತಮ ಪೊಲೀಸ್ ಸೌಲಭ್ಯಗಳನ್ನು ಒದಗಿಸಲು, ಪೊಲೀಸರಿಗೆ ಸಂಬಂಧಿಸಿದ ಸಾರ್ವಜನಿಕ ಉಪಯುಕ್ತತೆ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ಅವರು ಒತ್ತಿ ಹೇಳಿದ್ದಾರೆ.

ಭ್ರಷ್ಟಾಚಾರ ಮತ್ತು ಆರ್ಥಿಕ ಅಪರಾಧಗಳ ವಿರುದ್ಧ ಪರಿಣಾಮಕಾರಿ ಕ್ರಮಕ್ಕಾಗಿ ಭ್ರಷ್ಟಾಚಾರ ತಡೆ ಸಂಸ್ಥೆ, ಆರ್ಥಿಕ ಅಪರಾಧಗಳ ಸಂಶೋಧನಾ ವಿಭಾಗ (ಇಒಡಬ್ಲ್ಯು), ವಿಜಿಲೆನ್ಸ್, ಎಸ್‌ಐಟಿ ಮತ್ತು ಸಿಬಿಸಿಐಡಿಯನ್ನು ಹೆಚ್ಚು ಶಕ್ತಿಯುತ ಮತ್ತು ಪರಿಣಾಮಕಾರಿಯಾಗಿ ಮಾಡಲು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಾರದರ್ಶಕತೆ ತರಲು ಮತ್ತು ವಿವಿಧ ಪೊಲೀಸ್ ಘಟಕಗಳ ಕೆಲಸವನ್ನು ವೇಗಗೊಳಿಸಲು ತಂತ್ರಜ್ಞಾನದ ಬಳಕೆಯನ್ನು ಮತ್ತಷ್ಟು ಪ್ರೋತ್ಸಾಹಿಸಲಾಗುತ್ತದೆ ಎಂದು ಅವಸ್ತಿ ಹೇಳಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಮಹಿಳಾ ಬೀಟ್ ವ್ಯವಸ್ಥೆ ಮತ್ತು ಆ್ಯಂಟಿ ರೋಮಿಯೋ ಸ್ಕ್ವಾಡ್ ಅನ್ನು ಮತ್ತಷ್ಟು ಬಲಪಡಿಸಲಾಗುವುದು. ಮಾಫಿಯಾ ಮತ್ತು ಮಹಿಳಾ ಅಪರಾಧಗಳಿಗೆ ಗರಿಷ್ಠ ಶಿಕ್ಷೆಯನ್ನು ಒದಗಿಸಲು ವಿಶೇಷ ಪ್ರಾಸಿಕ್ಯೂಷನ್ ಘಟಕದ ರಚನೆಯನ್ನು ಸಹ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

ABOUT THE AUTHOR

...view details