ಕರ್ನಾಟಕ

karnataka

ತೆಲಂಗಾಣ ರಾಜಕೀಯಕ್ಕೆ ಆಂಧ್ರ ಸಿಎಂ ಸಹೋದರಿ ಹೆಜ್ಜೆ..?

By

Published : Feb 9, 2021, 3:03 PM IST

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ತೆಲಂಗಾಣದಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಾರೆ ಎಂಬ ವದಂತಿ ಎಲ್ಲೆಡೆ ಹರಿದಾಡುತ್ತಿದೆ.

Jagan's sister Sharmila
ವೈ.ಎಸ್. ಶರ್ಮಿಳಾ

ಹೈದರಾಬಾದ್ (ತೆಲಂಗಾಣ):ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಹೋದರಿ ವೈ.ಎಸ್. ಶರ್ಮಿಳಾ ಅವರು ತೆಲಂಗಾಣದಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಯೋಜನೆ ರೂಪಿಸಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

2004 ರಿಂದ 2009 ರವರೆಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ದಿವಂಗತ ವೈ.ಎಸ್.ರಾಜಶೇಖರ ರೆಡ್ಡಿ ಅವರ ಮಗ ವೈ.ಎಸ್ ಜಗನ್ ಮೋಹನ್ ರೆಡ್ಡಿ ಈಗಾಗಲೇ ರಾಜಕೀಯದಲ್ಲಿ ಸಾಕಷ್ಟು ಹೆಸರು ಗಳಿಸಿದ್ದು, ಆಂಧ್ರ ಮುಖ್ಯಮಂತ್ರಿಯಾಗಿದ್ದಾರೆ. ಇನ್ನು ಪುತ್ರಿ ಶರ್ಮಿಳಾ ಅವರು ರಾಜಕೀಯ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಶರ್ಮಿಳಾ ತನ್ನ ಸಹೋದರ ಜಗನ್ ಅವರ ಹಸ್ತಕ್ಷೇಪವಿಲ್ಲದೇ ತೆಲಂಗಾಣದಲ್ಲಿ ರಾಜಕೀಯ ಪಕ್ಷವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ವದಂತಿಗಳು ಹರಿದಾಡುತ್ತಿವೆ. ದಿವಂಗತ ರಾಜಶೇಖರ ರೆಡ್ಡಿ ಮತ್ತು ಅವರ ಆಪ್ತರೊಂದಿಗೆ ನಿಕಟ ಸಂಬಂಧ ಹೊಂದಿದ್ದ ಕೆಲವು ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ಅವರು ಸಂಪರ್ಕದಲ್ಲಿದ್ದಾರೆ ಎನ್ನಲಾಗ್ತಿದೆ.

ಇದನ್ನು ಓದಿ: ಬಾಲಿವುಡ್​ 'ಲವರ್​ ಬಾಯ್​' ರಾಜೀವ್​ ಕಪೂರ್​ ವಿಧಿವಶ...

ಇನ್ನು ರಾಜಕೀಯ ಪಕ್ಷವನ್ನು ಪ್ರಾರಂಭಿಸುತ್ತೀರಾ ಎಂದು ಕೇಳಿದಾಗ ಶರ್ಮಿಳಾ ನೇರವಾಗಿ ಪ್ರತಿಕ್ರಿಯಿಸಲಿಲ್ಲ. "ಈಗ ರಾಜಣ್ಣ ರಾಜ್ಯ (ರಾಜಶೇಖರ್ ರೆಡ್ಡಿ ಆಡಳಿತ) ಇಲ್ಲ. ಅದು ಏಕೆ ಬರಬಾರದು" ಎಂದು ಅವರು ಪ್ರಶ್ನೆ ಮಾಡುವ ಮೂಲಕ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದ್ದಾರೆ.

2019 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಶರ್ಮಿಳಾ ಮತ್ತು ಅವರ ತಾಯಿ ವಿಜಯಮ್ಮ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪರವಾಗಿ ತೀವ್ರ ಪ್ರಚಾರ ನಡೆಸಿದ್ದರು. ಜಗನ್ ಅವರ ವೈಎಸ್ಆರ್​ಸಿಪಿ ಪಕ್ಷ ಭರ್ಜರಿ ಜಯ ಸಾಧಿಸಿ ಅವರು ಆಂಧ್ರ ಆಡಳಿತವನ್ನು ವಹಿಸಿಕೊಂಡ ನಂತರ, ಶರ್ಮಿಳಾ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಂಡಿರಲಿಲ್ಲ.

ABOUT THE AUTHOR

...view details