ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ 2 ಸರ್ಕಾರ ಕೇಂದ್ರದಲ್ಲಿ ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದು 75 ದಿನ ಕಳೆದಿದ್ದು, ಇದೇ ವೇಳೆ ಖಾಸಗಿ ಸುದ್ದಿವಾಹಿನಿವೊಂದಕ್ಕೆ ಪ್ರಧಾನಿ ಮೋದಿ ವಿಶೇಷ ಸಂದರ್ಶನ ನೀಡಿದ್ದಾರೆ.
ಸ್ಪಷ್ಟ ನೀತಿ, ಸರಿಯಾದ ದಿಕ್ಕಿನಲ್ಲಿ ನಮ್ಮ ಸರ್ಕಾರ ಸಾಗುತ್ತಿದ್ದು, ಆರಂಭದಿಂದಲೇ ಅಭೂತಪೂರ್ವ ವೇಗದಲ್ಲಿ ಅಭಿವೃದ್ಧಿ ಕೆಲಸ ಮಾಡ್ತಿದ್ದೇವೆ ಎಂದರು. ಕೇವಲ 75 ದಿನದಲ್ಲಿ ಅನೇಕ ಪ್ರಮುಖ ನಿರ್ಧಾರ ನಮ್ಮ ಸರ್ಕಾರ ಕೈಗೊಂಡಿದ್ದು, ಮಕ್ಕಳ ಸುರಕ್ಷತೆಯಿಂದ ಚಂದ್ರಯಾನ-2ವರೆಗೂ,ಭ್ರಷ್ಟಾಚಾರದ ವಿರುದ್ಧ, ಮುಸ್ಲಿಂ ಮಹಿಳೆಯರ ಅಭಿವೃದ್ಧಿಗಾಗಿ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.