ಕರ್ನಾಟಕ

karnataka

ETV Bharat / bharat

ಭಾರತೀಯ ಪ್ರಜಾಪ್ರಭುತ್ವದಲ್ಲಿ ಇಂದು ಕರಾಳ ದಿನ: ಜಮ್ಮು-ಕಾಶ್ಮೀರ ಮಾಜಿ ಸಿಎಂ ಕಿಡಿ

ವಿಶೇಷ ಸ್ಥಾನಮಾನದ ಮೂಲಕ ದೇಶದಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಳ್ಳುತ್ತಿದ್ದ ಜಮ್ಮು ಮತ್ತು ಕಾಶ್ಮೀರದ ಆರ್ಟಿಕಲ್​ 370 ರದ್ದತಿಯ ಶಿಫಾರಸಿಗೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಕಿಡಿಕಾರಿದ್ದಾರೆ.

ಮೆಹಬೂಬಾ ಮುಫ್ತಿ

By

Published : Aug 5, 2019, 1:16 PM IST

ನವದೆಹಲಿ:ಕಾಶ್ಮೀರದ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆಟಿರ್ಕಲ್ 370 ರದ್ಧತಿಗೆ ಶಿಫಾರಸು ಮಾಡಿದೆ.

370 ರದ್ದಿಗೆ ಶಿಫಾರಸು..! ಚುನಾವಣಾ ಪ್ರಣಾಳಿಕೆ ಈಡೇರಿಸಿದ ಶಾ

ಚುನಾವಣಾ ಪ್ರಣಾಳಿಕೆ ಈಡೇರಿಸಿದ ಶಾಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಹತ್ವದ ಘೋಷಣೆ ಮಾಡಿದ ಕೆಲ ಹೊತ್ತಿನಲ್ಲಿ ಟ್ವೀಟ್ ಮೂಲಕ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆಕ್ರೋಶ ಹೊರಹಾಕಿದ್ದಾರೆ.

ಭಾರತೀಯ ಪ್ರಜಾಪ್ರಭುತ್ವದಲ್ಲಿ ಇಂದು ಕರಾಳ ದಿನ. ಆರ್ಟಿಕಲ್ 370ರ ರದ್ದುಗೊಳಿಸುವ ನಡೆ ಅಸಂವಿಧಾನಿಕ ಹಾಗೂ ಕಾನೂನು ಬಾಹಿರ ಎಂದು ಮೆಹಬೂಬಾ ಮುಫ್ತಿ ಟ್ವೀಟ್ ಮೂಲಕ ಕೇಂದ್ರದ ನಡೆಯನ್ನು ಖಂಡಿಸಿದ್ದಾರೆ.

ಐತಿಹಾಸಿಕ ಘೋಷಣೆ... ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಗೆ ಕಣಿವೆ ರಾಜ್ಯ!

ABOUT THE AUTHOR

...view details