ಕರ್ನಾಟಕ

karnataka

Farm Laws: ಮೃತ ರೈತ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ನೀಡಿ.. ಪ್ರಧಾನಿಗೆ ವರುಣ್​ ಗಾಂಧಿ ಪತ್ರ

By

Published : Nov 20, 2021, 3:31 PM IST

Varun gandhi
Varun gandhi

ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆ(Repeal of farm laws) ಇದೀಗ ವಾಪಸ್​ ಪಡೆದುಕೊಳ್ಳಲಾಗಿದ್ದು, ಇದೇ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಸಂಸದ ವರುಣ್​ ಗಾಂಧಿ, 1 ಕೋಟಿ ರೂ. ಪರಿಹಾರ(1 crore compensation) ನೀಡುವಂತೆ ಮನವಿ ಮಾಡಿದ್ದಾರೆ.

ನವದೆಹಲಿ:ಕೇಂದ್ರ ಸರ್ಕಾರ ಕಳೆದ ವರ್ಷ ಜಾರಿಗೆ ತಂದಿದ್ದ ಮೂರು ವಿವಾದಿತ ಕೃಷಿ ಕಾಯ್ದೆ(farm laws) ವಾಪಸ್​ ಪಡೆದುಕೊಂಡಿದ್ದು, ಅನ್ನದಾತರ ಹೋರಾಟಕ್ಕೆ ಜಯ ಸಿಕ್ಕಿದೆ. ಈ ವಿಚಾರವಾಗಿ ಬಿಜೆಪಿ ಸಂಸದ ವರುಣ್(MP Varun Gandhi) ಗಾಂಧಿ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಆಡಳಿತರೂಢ ಬಿಜೆಪಿ ವಿರುದ್ಧ ಮೇಲಿಂದ ಮೇಲೆ ವಾಗ್ದಾಳಿ ನಡೆಸುತ್ತಿರುವ ಪಿಲಿಭಿತ್​ನ ಬಿಜೆಪಿ ಸಂಸದ ವರುಣ್​ ಗಾಂಧಿ, ಕೃಷಿ ಕಾಯ್ದೆ ನಿಷೇಧ ವಿಚಾರಕ್ಕೂ ಸಂಬಂಧಿಸಿದಂತೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆಯೇ ಇಂತಹ ನಿರ್ಧಾರ ಕೈಗೊಂಡಿದ್ದರೆ ಅಮಾಯಕ ಜೀವಗಳು ತಮ್ಮ ಪ್ರಾಣ ಕಳೆದುಕೊಳ್ಳುತ್ತಿರಲಿಲ್ಲ. ಪ್ರತಿಭಟನೆ ವೇಳೆ ಸಾವನ್ನಪ್ಪಿರುವ ರೈತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿಗೆ ಪತ್ರ ಬರೆದ ವರುಣ್ ಗಾಂಧಿ

ಇದನ್ನೂ ಓದಿರಿ:ಹೆಂಡ್ತಿ ಮೈಬಣ್ಣ ಕಪ್ಪು ಎಂದು ತಲಾಖ್​ ನೀಡಿದ ಗಂಡ.. ಪೊಲೀಸ್ ಠಾಣೆ ಮೆಟ್ಟಿಲೇರಿದ ಮಡದಿ..

ಲಖೀಂಪುರ ಖೇರಿ(Lakhimpur Kheri) ಜಿಲ್ಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಾರು ಹರಿಸಿದ ಪ್ರಕರಣವನ್ನು ಸಹ ಉಲ್ಲೇಖಿಸಿರುವ ವರುಣ್​ ಗಾಂಧಿ, ಕೃಷಿ ಸಚಿವರ ಮಗನ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಜೊತೆಗೆ ಪ್ರತಿಭಟನೆ ವೇಳೆ ರೈತರ ವಿರುದ್ಧ ದಾಖಲಾಗಿರುವ ಎಲ್ಲ ಎಫ್​ಐಆರ್​​ ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ. ಕೃಷಿ ಕಾಯ್ದೆ ನಿಷೇಧದ ಹೋರಾಟದಲ್ಲಿ ದೇಶದ 700ಕ್ಕೂ ಅಧಿಕ ರೈತ ಸಹೋದರರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಕೆಲವೊಂದು ಕಷ್ಟಕರ ಸಮಯದಲ್ಲೂ ಶಾಂತಿಯುತವಾಗಿ ಅವರು ಪ್ರತಿಭಟನೆ ನಡೆಸಿದ್ದಾರೆ. ಹುತಾತ್ಮರಾದ ರೈತರಿಗೆ ಪರಿಹಾರ ನೀಡಿ ಎಂದಿದ್ದಾರೆ.

ರೈತರ ಕನಿಷ್ಟ ಬೆಂಬಲ ಬೆಲೆ(Minimum Support Price) ಕಾನೂನುಬದ್ಧಗೊಳಿಸುವಂತೆ ಪತ್ರದಲ್ಲಿ ಮನವಿ ಮಾಡಿರುವ ವರುಣ್ ಗಾಂಧಿ, ರೈತರು ಬೆಳೆದ ಬೆಳೆಗಳಿಗೆ ಸರಿಯಾದ ದರ ಸಿಗುವಂತೆ ನೋಡಿಕೊಳ್ಳಬೇಕಾಗಿದೆ ಎಂದಿದ್ದಾರೆ. ಇದರ ಜೊತೆಗೆ ಕೃಷಿ ಕಾಯ್ದೆ ವಾಪಸ್​ ಪಡೆದುಕೊಂಡಿರುವುದಕ್ಕಾಗಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ABOUT THE AUTHOR

...view details