ಕರ್ನಾಟಕ

karnataka

ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತಕ್ಕೆ ಕಾಲಿಟ್ಟಿರುವ 70 ಶಂಕಿತ ಉಗ್ರರು.. ಶೋಧಕ್ಕೆ ಮುಂದಾದ ಕೇಂದ್ರೀಯ ಸಂಸ್ಥೆಗಳು

By ETV Bharat Karnataka Team

Published : Oct 21, 2023, 12:50 PM IST

ಭಯೋತ್ಪಾದಕರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿರುವ ಶಂಕೆಯನ್ನು ಕೇಂದ್ರ ಗುಪ್ತಚರ ಸಂಸ್ಥೆಗಳು ವ್ಯಕ್ತಪಡಿಸಿವೆ.

Central agencies suspect 70 terrorists  70 terrorists entered India with fake passports  terrorists entered India  ಭಾರತಕ್ಕೆ ಕಾಲಿಟ್ಟಿರುವ 70 ಶಂಕಿತ ಉಗ್ರರು  ನಕಲಿ ಪಾಸ್‌ಪೋರ್ಟ್‌  ಭಯೋತ್ಪಾದಕರು ಅಕ್ರಮವಾಗಿ ದೇಶಕ್ಕೆ ಪ್ರವೇಶ  ಕೇಂದ್ರ ಗುಪ್ತಚರ ಸಂಸ್ಥೆಗಳು ವ್ಯಕ್ತ  70 ಉಗ್ರರು ನಕಲಿ ಪಾಸ್‌ಪೋರ್ಟ್‌  ಉಗ್ರರು ಅಕ್ರಮವಾಗಿ ದೇಶಕ್ಕೆ ಪ್ರವೇಶ  ಎಲ್ಲಾ ಗಡಿಗಳಲ್ಲಿ ಬಿಗಿ ಬಂದೋಬಸ್ತ್​ ವ್ಯವಸ್ಥೆ  ಭಯೋತ್ಪಾದಕರ ಶೋಧಕ್ಕೆ ಕ್ರಮ ಕೈಗೊಂಡಿರುವ  ಭಯೋತ್ಪಾದನೆ ಮೇಲೆ ಎನ್ಐಎ ದಾಳಿ
ನಕಲಿ ಪಾಸ್‌ಪೋರ್ಟ್‌ ಬಳಸಿ ಭಾರತಕ್ಕೆ ಕಾಲಿಟ್ಟಿರುವ 70 ಶಂಕಿತ ಉಗ್ರರು

ನವದೆಹಲಿ:ನಕಲಿ ಪಾಸ್‌ಪೋರ್ಟ್‌ನೊಂದಿಗೆ ಉಗ್ರರು ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ಶಂಕೆ ವ್ಯಕ್ತಪಡಿಸಿವೆ. ಸುಮಾರು 70 ಉಗ್ರರು ನೇಪಾಳದ ಗಡಿಯಿಂದ ಭಾರತವನ್ನು ಪ್ರವೇಶಿಸಿದ್ದಾರೆ. ಇವರೆಲ್ಲರೂ ಐಎಸ್‌ಐ (ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್) ಅಥವಾ ಜಮ್ಮತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಬಾಂಗ್ಲಾದೇಶದ ಗಡಿಯಲ್ಲಿ ಎಚ್ಚರಿಕೆ ನೀಡಿದೆ.

ಪ್ರಸ್ತುತ ಎಲ್ಲಾ ಗಡಿಗಳಲ್ಲಿ ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ. ಆದರೆ, ಕೆಲವೆಡೆ ಮಾತ್ರ ಅಕ್ರಮವಾಗಿ ಉಗ್ರರು ನುಗ್ಗುತ್ತಿದ್ದಾರೆ. ಅದರಲ್ಲೂ ಪಾಕಿಸ್ತಾನದ ಕಡೆಯಿಂದ ಭಾರತದೊಳಗೆ ನುಸುಳುವುದು ಅಸಾಧ್ಯ. ಅದಕ್ಕಾಗಿಯೇ ನೇಪಾಳದ ಗಡಿಯಿಂದ ಭಯೋತ್ಪಾದಕರು ಭಾರತಕ್ಕೆ ಬರುತ್ತಿದ್ದಾರೆ. ಭಯೋತ್ಪಾದಕರ ಹೊರತಾಗಿ ಕೆಲವು ವಿದೇಶಿಯರೂ ದೇಶಕ್ಕೆ ಪ್ರವೇಶಿಸಿದ್ದಾರೆ ಎಂದು ಕೇಂದ್ರ ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಅಕ್ರಮವಾಗಿ ಭಾರತ ಪ್ರವೇಶಿಸಿರುವ ಭಯೋತ್ಪಾದಕರ ಶೋಧಕ್ಕೆ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ಸಂಸ್ಥೆಯ ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳು ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಆರಂಭಿಸಿರುವುದಾಗಿ ತಿಳಿಸಿವೆ. ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಕೇಂದ್ರ ಭದ್ರತಾ ಏಜೆನ್ಸಿಗಳೊಂದಿಗೆ ಈಗಾಗಲೇ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೋಧ ನಡೆಸಿದೆ. ಕೆಲವರು ನಕಲಿ ಪಾಸ್‌ಪೋರ್ಟ್‌ನೊಂದಿಗೆ ಪ್ರವೇಶಿಸಿರುವುದು ಪತ್ತೆಯಾಗಿದೆ. ಸಿಬಿಐ ರಾಷ್ಟ್ರೀಯ ತನಿಖಾ ಸಂಸ್ಥೆ ಜೊತೆ ಬಂಗಾಳ ಪೊಲೀಸರು ಸಭೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಘಟನೆ- ಭಯೋತ್ಪಾದನೆ ಮೇಲೆ ಎನ್ಐಎ ದಾಳಿ:ಖಲಿಸ್ತಾನ್ ಮತ್ತು ಇತರ ಭಯೋತ್ಪಾದಕ ಗುಂಪುಗಳು, ದರೋಡೆಕೋರರು ಮತ್ತು ಕಳ್ಳಸಾಗಣೆದಾರರನ್ನು ಹತ್ತಿಕ್ಕುವ ಉದ್ದೇಶದಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇತ್ತೀಚೆಗೆ ದೇಶದ ಹಲವು ರಾಜ್ಯಗಳಲ್ಲಿ ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿತು. ಸ್ಥಳೀಯ ಪೊಲೀಸರ ಜೊತೆಗೆ ಪಂಜಾಬ್, ರಾಜಸ್ಥಾನ, ಹರಿಯಾಣ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ದೆಹಲಿ ಮತ್ತು ಚಂಡೀಗಢದ ಕೇಂದ್ರಾಡಳಿತ ಪ್ರದೇಶಗಳ 53 ಪ್ರದೇಶಗಳಲ್ಲಿ ಏಕಕಾಲದಲ್ಲಿ ಎನ್​ಐಎ ದಾಳಿ ನಡೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹಲವು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಸುಪಾರಿ ಕೊಲೆಗಳು, ದರೋಡೆಗಳು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಭಯೋತ್ಪಾದಕರು, ಕಳ್ಳಸಾಗಣೆದಾರರು ಮತ್ತು ದರೋಡೆಕೋರರ ಪಾಲ್ಗೊಳ್ಳುವಿಕೆಯ ಮೇಲೆ NIA ಗಮನಹರಿಸಿದೆ. (ಪಿಟಿಐ)

ಓದಿ:ಬೆಂಗಳೂರಲ್ಲಿ ಆಧಾರ್, ವೋಟರ್ ಐಡಿ ನಕಲು ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ABOUT THE AUTHOR

...view details