ಕರ್ನಾಟಕ

karnataka

ಹಿಮಾಚಲದ ಸೋಲನ್‌ನಲ್ಲಿ ಮೇಘಸ್ಫೋಟ: ಒಂದೇ ಕುಟುಂಬದ 7 ಮಂದಿ ಬಲಿ, ಮೂವರು ನಾಪತ್ತೆ!

By

Published : Aug 14, 2023, 9:49 AM IST

cloudburst in Himachal Pradesh: ಸೋಲನ್‌ನ ಕಂದಘಾಟ್ ಉಪವಿಭಾಗದ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವಿಗೀಡಾಗಿದ್ದಾರೆ

cloudburst in Himachal Pradesh
ಹಿಮಾಚಲದ ಸೋಲನ್‌ನಲ್ಲಿ ಮೇಘಸ್ಫೋಟ

ಸೋಲನ್ (ಹಿಮಾಚಲ ಪ್ರದೇಶ):ಇಂದು ಸೋಲನ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿ, ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆ ಶಿಮ್ಲಾ-ಚಂಡೀಗಢ ರಸ್ತೆ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪ್ರಾಥಮಿಕ ಪ್ರಕಾರ "ಸೋಲನ್‌ನ ಕಂದಘಾಟ್ ಉಪವಿಭಾಗದ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದು, ಮೂವರು ಕಾಣೆಯಾಗಿದ್ದಾರೆ ಮತ್ತು ಐವರನ್ನು ರಕ್ಷಿಸಲಾಗಿದೆ" ಎಂದು ಕಂದಘಾಟ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಿದ್ಧಾರ್ಥ ಆಚಾರ್ಯ ತಿಳಿಸಿದ್ದಾರೆ.

ಸೋಲನ್‌ನ ಕಂದಘಾಟ್ ಉಪವಿಭಾಗದ ಜಾಡೋನ್ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಪ್ರಾಕೃತಿಕ ವಿಕೋಪದಲ್ಲಿ ಎರಡು ಮನೆಗಳು ಮತ್ತು ಒಂದು ಗೋಶಾಲೆ ಕೊಚ್ಚಿಕೊಂಡು ಹೋಗಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳಿಗಾಗಿನಿರೀಕ್ಷಿಸಲಾಗುತ್ತಿದೆ.

ಸ್ನಾತಕೋತ್ತರ ಪದವಿ ಪರೀಕ್ಷೆ ರದ್ದು: ನಿರಂತರ ಮಳೆ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಇಂದು (ಆ.14) ರಂದು ನಡೆಯಬೇಕಿದ್ದ ಸ್ನಾತಕೋತ್ತರ ಪದವಿಯ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಸರ್ಕಾರ ಭಾನುವಾರ ಪ್ರಕಟಣೆ ಮೂಲಕ ತಿಳಿಸಿದೆ. ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ.

ಭಾರಿ ಮಳೆಯಿಂದಾಗಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳು ಇಂದು ಎಲ್ಲಾ ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಅಧಿಸೂಚನೆ ಹೊರಡಿಸಿದ್ದಾರೆ. ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಬಗ್ಗೆ ತೀವ್ರ ನಿಗಾ ವಹಿಸುವಂತೆ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಹಾಗೂ ಎಲ್ಲ ಡಿಸಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಆಡಳಿತ ಸಿಬ್ಬಂದಿ ಎಚ್ಚೆತ್ತುಕೊಂಡು ರಸ್ತೆ, ವಿದ್ಯುತ್ ಮತ್ತು ನೀರಿನ ವ್ಯವಸ್ಥೆಗಳನ್ನು ಸುಗಮವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ಧಾರೆ.

ಆ. 10 ರಂದು, ಸಿರ್ಮೌರ್‌ನಲ್ಲಿ ಮೇಘಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ನಾಪತ್ತೆಯಾಗಿದ್ದ ಒಂದೇ ಕುಟುಂಬದ 5 ಸದಸ್ಯರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದರು, ಕುಲದೀಪ್ ಕಮರ್ ಎಂಬುವವರ ಕುಟುಂಬದ ಐವರು ಸದಸ್ಯರು ಕಾಣೆಯಾಗಿದ್ದಾರೆ ಎಂದು ಸಿರ್ಮೌರ್ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ(DEOC)ದ ಅಧಿಕಾರಿಗಳು ಮಾಹಿತಿ ನೀಡಿದ್ದರು. ರಾಜ್ಯದ ಮಾಳಗಿ ದಡಿಯಾತ್, ಔಲಿ, ತಹಸಿಲ್ ಪೌಂಟಾ ಸಾಹಿಬ್, ಸಿರ್ಮೌರ್ ಜಿಲ್ಲೆಯ ಸಿರ್ಮೌರ್​ನಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ (SEOC) ಬುಲೆಟಿನ್​ನಲ್ಲಿ ತಿಳಿಸಿತ್ತು.

ಇದನ್ನೂ ಓದಿ:ಹಿಮಾಚಲಪ್ರದೇಶದಲ್ಲಿ ಮೇಘಸ್ಫೋಟ, ಒಂದೇ ಕುಟುಂಬದ ಐವರು ನಾಪತ್ತೆ, ಮತ್ತೆ ಪ್ರವಾಹ ಪರಿಸ್ಥಿತಿ: ವಿಡಿಯೋ

ಮೇಘಸ್ಫೋಟ ಎಂದರೇನು?:ಮೇಘ ಸ್ಫೋಟವೆಂದರೆ ಅತಿ ದೊಡ್ಡ ಗಾತ್ರದ ನೀರಿನ ಮೋಡ ಭೂಮಿಯ ವಾತಾವರಣದಲ್ಲಿ ಶೇಖರಣೆಯಾಗಿ ಅದು ಒಮ್ಮಿಂದೊಮ್ಮೆಲೆ ಭೂಮಿಯ ಮೇಲೆ ಸುರಿಯುವುದು. ಈ ಸುರಿಯುವಿಕೆಗೆ ಕಾರಣವೆಂದರೆ, ಗುಡುಗು, ಸಿಡಿಲುಗಳಿಂದ ಹಾಗೂ ಕೆಲವು ಬಾರಿ ಆಲಿಕಲ್ಲುಗಳಿಂದ ಕೂಡಿದ ಭಾರಿ ಮಳೆ ಆಗುವುದೇ ಇಷ್ಟಕ್ಕೆಲ್ಲ ಕಾರಣ. ಸಾಮಾನ್ಯವಾಗಿ ಈ ರೀತಿಯ ಮಳೆ ಬೀಳುವುದು ಕೆಲವೇ ನಿಮಿಷಗಳು. ಆದರೆ ಇದರ ಪರಿಣಾಮ ಮಾತ್ರ ಭಾರಿ ಭೀಕರವಾಗಿರುತ್ತದೆ.

ಇದನ್ನೂ ಓದಿ:Cloud burst: ಮೇಘಸ್ಫೋಟಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ.. ಚರಂಡಿಯಲ್ಲಿ ಸಿಲುಕಿದ ವಾಹನಗಳು

ABOUT THE AUTHOR

...view details