ಕರ್ನಾಟಕ

karnataka

4ನೇ ಸುತ್ತಿನ ವಿಚಾರಣೆ: ಇಡಿ ಮುಂದೆ ಹಾಜರಾದ ರಾಹುಲ್ ಗಾಂಧಿ

By

Published : Jun 20, 2022, 12:09 PM IST

Updated : Jun 20, 2022, 12:17 PM IST

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಜೂನ್ 13 ರಿಂದ 15 ರವರೆಗೆ ವಿಚಾರಣೆ ನಡೆಸಿತ್ತು. ಸುಮಾರು 30 ಗಂಟೆಗಳಿಗೂ ಹೆಚ್ಚಿನ ಕಾಲ ಅವರನ್ನು ಪ್ರಶ್ನೆ ಮಾಡಿತ್ತು. ಇಂದೂ ಕೂಡಾ ವಿಚಾರಣೆ ಮುಂದುವರೆದಿದೆ.

Rahul Gandhi
ರಾಹುಲ್ ಗಾಂಧಿ

ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದಾರೆ. ಈ ನಡುವೆ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರು ಹಿರಿಯ ನಾಯಕರ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ಮುಂದುವರಿಸಿದ್ದಾರೆ.

ದೇಶಾದ್ಯಂತ ಕಾಂಗ್ರೆಸ್​ ನಾಯಕರ ತೀವ್ರ ಪ್ರತಿಭಟನೆ ನಡುವೆ, ವಯನಾಡು ಸಂಸದರೂ ಆಗಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಜೂನ್ 13 ರಿಂದ 15 ರವರೆಗೆ ವಿಚಾರಣೆ ನಡೆಸಿತ್ತು. ಸುಮಾರು 30 ಗಂಟೆಗಳಿಗೂ ಹೆಚ್ಚಿನ ಕಾಲ ಅವರನ್ನು ಪ್ರಶ್ನೆ ಮಾಡಿತ್ತು. ಇಂದೂ ಕೂಡಾ ಇಡಿ ಅಧಿಕಾರಿಗಳು ರಾಹುಲ್​ ಗಾಂಧಿ ಅವರನ್ನು ಪ್ರಶ್ನಿಸುತ್ತಿದ್ದಾರೆ.

ಗಮನಾರ್ಹ ವಿಷಯ ಎಂದರೆ ಶುಕ್ರವಾರವೇ ವಿಚಾರಣೆಗೆ ಹಾಜರಾಗುವಂತೆ ಇಡಿ ರಾಹುಲ್​ ಗಾಂಧಿಗೆ ಸಮನ್ಸ್​ ಜಾರಿ ಮಾಡಿತ್ತು. ಆದರೆ ಅವರು ಶುಕ್ರವಾರದ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಅಧಿಕಾರಿಗಳನ್ನು ಕೋರಿಕೊಂಡಿದ್ದರು. ಈ ಮನವಿಗೆ ಒಪ್ಪಿಗೆ ನೀಡಿದ್ದ ಇಡಿ ಅಧಿಕಾರಿಗಳು ಇಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿತ್ತು.

ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಜೂನ್ 17 ರಿಂದ ಜೂನ್ 20 ರವರೆಗೆ ಅವರ ವಿಚಾರಣೆ ಮುಂದೂಡಬೇಕು ಎಂಬ ಕಾಂಗ್ರೆಸ್​ ಮಾಜಿ ಅಧ್ಯಕ್ಷರ ಮನವಿಯನ್ನು ಇಡಿ ಸಮ್ಮತಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಇಂದು ಇಡಿ ಮುಂದೆ ಹಾಜರಾಗಿದ್ದು, ವಿಚಾರಣೆ ಎದುರಿಸುತ್ತಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ:ಜಂತರ್​​ ಮಂತರ್​ನಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್​ ಖರ್ಗೆ, ಸಲ್ಮಾನ್​ ಖುರ್ಷಿದ್​, ಕೆ ಸುರೇಶ್​,ವಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ದೆಹಲಿ ಪೊಲೀಸರು ಜಂತರ್​ ಮಂತರ್​ನಲ್ಲಿ 1000 ಜನರಿಗೆ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ನೀಡಿದ್ದಾರೆ.

ಇದನ್ನೂ ಓದಿ:ನಾಲ್ಕು ದಿನಗಳ ಬಿಡುವಿನ ಬಳಿಕೆ ಮತ್ತೆ ಇಡಿ ಮುಂದೆ ರಾಹುಲ್​ ಹಾಜರು ಸಾಧ್ಯತೆ: ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

Last Updated : Jun 20, 2022, 12:17 PM IST

ABOUT THE AUTHOR

...view details