ಕರ್ನಾಟಕ

karnataka

Five state assembly election : ಛತ್ತೀಸ್​ಗಢ, ಮಧ್ಯಪ್ರದೇಶ, ತೆಲಂಗಾಣ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

By ETV Bharat Karnataka Team

Published : Oct 15, 2023, 11:45 AM IST

Updated : Oct 15, 2023, 12:36 PM IST

ಕಾಂಗ್ರೆಸ್​ ಇಂದು ಛತ್ತೀಸ್​ಗಢ, ಮಧ್ಯಪ್ರದೇಶ, ತೆಲಂಗಾಣ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

congress-releases-first-list-for-chhattisgarh-mp-telangana-polls-contesting-candidates
ಪಂಚರಾಜ್ಯ ಚುನಾವಣೆ : ಛತ್ತೀಸ್​ಗಢ, ಮಧ್ಯಪ್ರದೇಶ, ತೆಲಂಗಾಣದ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನವದೆಹಲಿ :ಮುಂಬರುವ ಪಂಚರಾಜ್ಯ ಚುನಾವಣೆ ಹಿನ್ನೆಲೆ ಕಾಂಗ್ರೆಸ್​, ಮೂರು ರಾಜ್ಯಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. ಕಾಂಗ್ರೆಸ್​ ತನ್ನ ಮೊದಲ ಪಟ್ಟಿಯಲ್ಲಿ ಮಧ್ಯಪ್ರದೇಶದ 230 ಸ್ಥಾನಗಳಲ್ಲಿ 144 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಛತ್ತೀಸ್​ಗಢದಲ್ಲಿ 30 ಅಭ್ಯರ್ಥಿಗಳ ಹಾಗೂ ತೆಲಂಗಾಣದಲ್ಲಿ 55 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನವರಾತ್ರಿಯ ಸುಸಂದರ್ಭದಲ್ಲಿ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದೆ.

ಕಾಂಗ್ರೆಸ್​ ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕಾಂಗ್ರೆಸ್​ ಇಂದು ಮಧ್ಯ ಪ್ರದೇಶದ 230 ವಿಧಾನಸಭಾ ಕ್ಷೇತ್ರಗಳ ಪೈಕಿ 144 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೆಲಂಗಾಣದ 90 ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಛತ್ತೀಸ್​ಗಢದ 90 ಕ್ಷೇತ್ರಗಳ ಪೈಕಿ 30 ಕ್ಷೇತ್ರಗಳ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್​ ಮಾಜಿ ಮುಖ್ಯಮಂತ್ರಿ, ಪ್ರದೇಶ್​ ಕಾಂಗ್ರೆಸ್​ ಸಮಿತಿ (ಪಿಸಿಸಿ) ಮುಖ್ಯಸ್ಥ ಕಮಲ್​ನಾಥ್ ಅವರು​ ಛಿಂದ್ವಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಡಾ. ಗೋವಿಂದ್​ ಸಿಂಗ್​ ಅವರು ಲಹರಾ ಕ್ಷೇತ್ರದಿಂದ ಹಾಗೂ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್​ ಸಿಂಗ್​ ಪುತ್ರ ಜೈವರ್ಧನ್​ ಸಿಂಗ್ ಅವರು ರಾಘೋಗಡ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಛತ್ತೀಸ್​ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್​ ಬಘೇಲ್​ ಅವರು ತಮ್ಮ ಪಠಾಣ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ. ಉಪಮುಖ್ಯಮಂತ್ರಿ ಟಿ.ಎಸ್​ ಸಿಂಗ್​ ಡಿಯೋ ಅಂಬಿಕಾಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್​ ರೆಡ್ಡಿ ಕೊಡಂಗಲ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದು, ಶಾಸಕಾಂಗ ಪಕ್ಷದ ನಾಯಕ ಮಲ್ಲು ಬಟ್ಟಿ ವಿಕ್ರಮಾರ್ಕ ಎಸ್​ಸಿ ಮೀಸಲು ಕ್ಷೇತ್ರ ಮಾಧಿರದಲ್ಲಿ ಕಣಕ್ಕಿಳಿಯಲಿದ್ದಾರೆ. ಡಾ. ಕೋಟ ನೀಲಿಮಾ ಸನತ್​ ನಗರ ವಿಧಾನಸಭಾ ಕ್ಷೇತ್ರ ಮತ್ತು ಜುಪಲ್ಲಿ ಕೃಷ್ಣ ರಾವ್​ ಅವರು ಕೊಲ್ಲಾಪುರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದಾರೆ.

ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಛತ್ತೀಸ್​ಗಢ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ, ಮಿಜೋರಾಂ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದೆ. ಛತ್ತೀಸ್​ಗಢದಲ್ಲಿ ನವೆಂಬರ್​ 7 ಮತ್ತು 17ರಂದು ಎರಡು ಹಂತಗಳಲ್ಲಿ ವೋಟಿಂಗ್​ ನಡೆಯಲಿದೆ. ನವೆಂಬರ್​ 17ರಂದು ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ನವೆಂಬರ್ 30ಕ್ಕೆ ಮತದಾನ ನಡೆಯಲಿದೆ. ಡಿಸೆಂಬರ್​ 3ಕ್ಕೆ ಚುನಾವಣಾ ಫಲಿತಾಂಶ ಘೋಷಣೆ ಆಗಲಿದ್ದು, ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ :ಮಹಿಳಾ ಮೀಸಲಾತಿ ಮಸೂದೆಯನ್ನು ಶೀಘ್ರದಲ್ಲೇ ಜಾರಿಗೊಳಿಸುವುದು ಇಂಡಿಯಾ ಒಕ್ಕೂಟದ ಗುರಿ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ

Last Updated : Oct 15, 2023, 12:36 PM IST

ABOUT THE AUTHOR

...view details