ಅಚ್ಚಂಪೇಟೆ (ತೆಲಂಗಾಣ):ಸರಕಾರಿ ಆಸ್ಪತ್ರೆ ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ಮಹಿಳೆಯು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಜಿಲ್ಲೆಯ ನಾಗರ್‌ಕರ್ನೂಲ್‌ನಲ್ಲಿ ನಡೆದಿದೆ. ಇದಕ್ಕೆ ಕಾರಣರಾದ ವೈದ್ಯನನ್ನು ಅಮಾನತು ಮಾಡಲಾಗಿದೆ.
ಸಂತ್ರಸ್ತೆಯ ಕುಟುಂಬಸ್ಥರ ಪ್ರಕಾರ, ಅಚ್ಚಂಪೇಟೆ ಪುರಸಭೆ ವ್ಯಾಪ್ತಿಯ ದರ್ಶನಗಡತಾಂಡದ ಗರ್ಭಿಣಿ ರಮಾವತ್ ರೋಜಾ (27) ಎಂಬುವರು ಆಗಸ್ಟ್ 15ರಂದು ಹೆರಿಗೆಗಾಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕರ್ತವ್ಯದಲ್ಲಿದ್ದ ವೈದ್ಯರು ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿದ ವೇಳೆ, ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಮೂರು ದಿನಗಳ ಚಿಕಿತ್ಸೆ ಬಳಿಕ ಮಹಿಳೆಯನ್ನು ಮನೆಗೆ ಕಳುಹಿಸಲಾಯಿತು.
ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಸಾವು :ಮಹಿಳೆಮನೆಗೆ ಹೋದ ನಂತರ ಸ್ವಲ್ಪ ರಕ್ತಸ್ರಾವ ಶುರುವಾಗಿದೆ. ಮಂಗಳವಾರ ಸಮಸ್ಯೆ ಉಲ್ಬಣಿಸಿದ್ದರಿಂದ ಮತ್ತೆ ಸರ್ಕಾರಿ ಆಸ್ಪತ್ರೆಗೆ ಕರೆಕೊಂಡು ಬರಲಾಯಿತು. ಆ ವೇಳೆ ಸರ್ಕಾರಿ ಆಸ್ಪತ್ರೆ ವೈದ್ಯರು, ತಮ್ಮದೆ ಖಾಸಗಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ಅಲ್ಲಿಗೆ ಹೋದ ವೇಳೆಯಲ್ಲಿ, ಸಂಜೆಯವರೆಗೂ ಮಹಿಳೆಯೊಂದಿಗೆ ಕುಟುಂಬಸ್ಥರು ಕಾಯ್ದು ಕುಳಿತಿದ್ದರು. ಬಳಿಕ ಆ ವೈದ್ಯ ಹೈದರಾಬಾದ್ಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದರು. ನಂತರ, ಮಹಿಳೆ ರೋಜಾ ಅವರನ್ನು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದ್ರೆ ಮಂಗಳವಾರ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.