ಕರ್ನಾಟಕ

karnataka

India COVID report.. ದೇಶದಲ್ಲಿ ಮತ್ತೆ 18,840 ಹೊಸ ಕೇಸ್ ಪತ್ತೆ, ಸೋಂಕಿಗೆ 43 ಮಂದಿ ಬಲಿ

By

Published : Jul 9, 2022, 10:20 AM IST

ದೇಶದಲ್ಲಿ ಮತ್ತೆ ಕೋವಿಡ್ ಉಲ್ಬಣ- 18,840 ಹೊಸ ಪ್ರಕರಣಗಳು ಪತ್ತೆ- 43 ಸೋಂಕಿತರು ಸಾವು

ಕೋವಿಡ್
ಕೋವಿಡ್

ನವದೆಹಲಿ: ಭಾರತದಲ್ಲಿ ಮತ್ತೆ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,840 ಹೊಸ ಕೇಸ್​​​ಗಳು ದೃಢಪಟ್ಟಿವೆ. 43 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರಕ್ಕೆ ಹೋಲಿಸಿದರೆ ಶನಿವಾರ 25 ಹೊಸ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದೊಂದು ದಿನದಲ್ಲಿ 16,104 ಜನರು ಕೋವಿಡ್​​ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​​ ಆಗಿದ್ದಾರೆ. ಈವರೆಗೆ ಒಟ್ಟು 4,29,53,980 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,25,028 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,386ಕ್ಕೆ ಏರಿಕೆಯಾಗಿದೆ. ಈವರೆಗೆ ದೃಢಪಟ್ಟ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,36,04,394 ತಲುಪಿದೆ.

ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಈವರೆಗೆ 86.61 ಕೋಟಿ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 4,54,778 ಮಂದಿಗೆ ಕೋವಿಡ್​ ಟೆಸ್ಟ್​ ಮಾಡಲಾಗಿದೆ. ಪ್ರಸ್ತುತ ದೇಶದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ 98.51% ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 4.14% ರಷ್ಟಿದೆ. ಸಕ್ರಿಯ ಪ್ರಕರಣಗಳ ದರ 0.29% ಇದ್ದು, ವಾರದ ಪಾಸಿಟಿವಿಟಿ ದರ 4.09 % ಇದೆ. ರಾಷ್ಟ್ರವ್ಯಾಪಿ ಕೋವಿಡ್​ ಲಸಿಕಾ ಅಭಿಯಾನದಡಿ ಈವರೆಗೆ 1,98,65,36,288 ಡೋಸ್​ ವ್ಯಾಕ್ಸಿನ್​ ನೀಡಲಾಗಿದ್ದು, ನಿನ್ನೆ 12,26,795 ಡೋಸ್ ಲಸಿಕೆ ನೀಡಲಾಗಿದೆ.

ಇದನ್ನೂ ಓದಿ:ದೇಶಾದ್ಯಂತ ಇಂದು ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ? ಇಲ್ಲಿದೆ ಮಾಹಿತಿ

ABOUT THE AUTHOR

...view details