ಕರ್ನಾಟಕ

karnataka

ದೆಹಲಿ ಅಬಕಾರಿ ನೀತಿ ಪ್ರಕರಣ: ಬೆಂಗಳೂರು, ಮಂಗಳೂರು ಸೇರಿ ದೇಶದ 40 ಕಡೆ ಇಡಿ ದಾಳಿ

By

Published : Sep 16, 2022, 10:43 AM IST

Delhi Excise Policy Case
Delhi Excise Policy Case

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ನವದೆಹಲಿ:ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಬೆಳ್ಳಂಬೆಳಗ್ಗೆ ಮಂಗಳೂರು, ಬೆಂಗಳೂರು, ಚೆನ್ನೈ ಸೇರಿದಂತೆ 40 ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಶೋಧಕಾರ್ಯದಲ್ಲಿ ಮಗ್ನವಾಗಿದೆ.

2021ರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​​ ಸರ್ಕಾರ ದೆಹಲಿಯಲ್ಲಿ ನೂತನ ಅಬಕಾರಿ ನೀತಿ ಜಾರಿಗೆ ತಂದಿದ್ದು, ಇದರಲ್ಲಿ ದೊಡ್ಡ ಮಟ್ಟದ ಹಗರಣ ನಡೆದಿದೆ ಎಂಬ ಮಾತು ಕೇಳಿ ಬಂದಿತ್ತು. ಹೀಗಾಗಿ, ಜಾರಿ ನಿರ್ದೇಶನಾಲಯ ತನಿಖೆ ಕೈಗೆತ್ತಿಕೊಂಡಿದೆ. ಇದರ ಬೆನ್ನಲ್ಲೇ ಈ ನೂತನ ಅಬಕಾರಿ ನೀತಿಯನ್ನ ಆಪ್​ ಹಿಂಪಡೆದುಕೊಂಡಿದೆ.

ಇದನ್ನೂ ಓದಿ:ದೆಹಲಿ ಅಬಕಾರಿ ನೀತಿ ಹಗರಣ: ಸಚಿವ ಸಿಸೋಡಿಯಾ ಸೇರಿ 13 ಮಂದಿಗೆ ಸಿಬಿಐ ಲುಕ್ ಔಟ್ ನೋಟಿಸ್

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳ ಹಿಂದೆ ಜಾರಿ ನಿರ್ದೇಶನಾಲಯ ದೆಹಲಿ, ಹರಿಯಾಣ ಸೇರಿದಂತೆ 35ಕ್ಕೂ ಅಧಿಕ ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದೀಗ ಮತ್ತೊಮ್ಮೆ ದಾಳಿ ಕೈಗೊಂಡಿದೆ. ಪ್ರಕರಣದಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೆಸರು ಕೇಳಿ ಬಂದಿದ್ದು, ಈಗಾಗಲೇ ಅನೇಕ ಸಲ ವಿಚಾರಣೆಗೊಳಪಡಿಸಲಾಗಿದೆ.

ABOUT THE AUTHOR

...view details