ಕರ್ನಾಟಕ

karnataka

ಶೋಪಿಯಾನ್​ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ: ಓರ್ವ ಉಗ್ರ ಹತ

By

Published : Jun 25, 2021, 3:52 PM IST

Updated : Jun 25, 2021, 4:07 PM IST

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಜೈನಪೋರಾ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನಾಕಾ ಪಾರ್ಟಿಯಲ್ಲಿ ಸೋಮವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಇನ್ನು ಕಾರ್ಯಾಚರಣೆಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

ಶೋಪಿಯಾನ್
ಶೋಪಿಯಾನ್

ಶೋಪಿಯಾನ್ :ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶಿರ್ಮಲ್ ಪ್ರದೇಶದಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ. ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

"ಶೋಪಿಯಾನ್‌ನ ಶಿರ್ಮಲ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಜೈನಪೋರಾ ಪ್ರದೇಶದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ನಾಕಾ ಪಾರ್ಟಿಯಲ್ಲಿ ಸೋಮವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು ಎಂದು ಸಿಆರ್​ಪಿಎಫ್ ಹೇಳಿಕೆಯಲ್ಲಿ ತಿಳಿಸಿದೆ.

Last Updated : Jun 25, 2021, 4:07 PM IST

ABOUT THE AUTHOR

...view details