ಕರ್ನಾಟಕ

karnataka

ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ, ಗುಂಡಿನ ಚಕಮಕಿ: ಉಗ್ರ ಹತ

By

Published : Feb 19, 2022, 9:30 AM IST

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ನಿಖರ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದ್ದು, ಈ ದಾಳಿ ವೇಳೆ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Encounter breaks out in JKs Shopian
ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ, ಗುಂಡಿನ ಚಕಮಕಿ

ಶೋಪಿಯಾನ್, ಜಮ್ಮು ಕಾಶ್ಮೀರ: ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಝೈನಾಪೋರಾ ಪ್ರದೇಶದ ಚೆರ್ಮಾರ್ಗ್‌ನಲ್ಲಿ ಶನಿವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಉಗ್ರನನ್ನು ಕೊಲ್ಲಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶೋಪಿಯಾನ್‌ನ ಚೆರ್ಮಾರ್ಗ್, ಝೈನಾಪೋರಾ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಉಗ್ರರಿರುವ ಪ್ರದೇಶವನ್ನು ಸುತ್ತುವರೆದಿವೆ. ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ನಿಖರ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದ್ದು, ಗುಂಡಿನ ಚಕಮಕಿ ನಡೆಯುತ್ತಿದ್ದು, ಒಬ್ಬ ಭಯೋತ್ಪಾಕನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:ಕೋಲ್ಕತ್ತಾದಲ್ಲಿ ಅಗ್ನಿ ದುರಂತ.!

ABOUT THE AUTHOR

...view details