ಕರ್ನಾಟಕ

karnataka

Goa Result : ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ.. ಉತ್ಪಾಲ್ ಪರಿಕ್ಕರ್​ಗೆ ಹಿನ್ನಡೆ

By

Published : Mar 10, 2022, 10:49 AM IST

ಚುನಾವಣಾ ಆಯೋಗದ ಪ್ರಕಾರ ರಾಣೆ ವಾಲ್ಪೊಯ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ವಿಶ್ವಜಿತ್, ಪೊರಿಯಮ್‌ ವಿಧಾನಸಭಾ ಕ್ಷೇತ್ರದಲ್ಲಿ ದೇವೀಯ ರಾಣೆ, ಸ್ವತಂತ್ರ ಅಭ್ಯರ್ಥಿಗಳಾದ ಲಕ್ಷ್ಮೀಕಾಂತ್ ಪರ್ಸೇಕರ್ ಮಾಂಡ್ರೆಮ್‌ನಲ್ಲಿ ಮುನ್ನಡೆ ಸಾಧಿಸಿದ್ದಾರೆ.

Goa: BJP leading on 8 seats; Congress, AAP on one each
Goa Result : ಬಿಜೆಪಿ 18 ಕ್ಷೇತ್ರಗಳಲ್ಲಿ ಮುನ್ನಡೆ.. ಉತ್ಪಾಲ್ ಪರಿಕ್ಕರ್​ಗೆ ಹಿನ್ನಡೆ

ಪಣಜಿ, ಗೋವಾ: ಮತ ಎಣಿಕೆಯ ಆರಂಭಿಕ ಟ್ರೆಂಡ್ ಪ್ರಕಾರ ಗೋವಾದಲ್ಲಿ ಭಾರತೀಯ ಜನತಾ ಪಕ್ಷವು ಕನಿಷ್ಟ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 14 ಮತ್ತು ಟಿಎಂಸಿ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಆಮ್ ಆದ್ಮಿ ಪಕ್ಷ ಮತ್ತು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ ತಲಾ ಒಂದು ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಪಣಜಿಯಲ್ಲಿ ಉತ್ಪಾಲ್ ಪರಿಕ್ಕರ್ ಹಿನ್ನೆಡೆ ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಪ್ರಕಾರ ರಾಣೆ ವಾಲ್ಪೊಯ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ವಿಶ್ವಜಿತ್, ಪೊರಿಯಮ್‌ ವಿಧಾನಸಭಾ ಕ್ಷೇತ್ರದಲ್ಲಿ ದೇವೀಯ ರಾಣೆ, ಸ್ವತಂತ್ರ ಅಭ್ಯರ್ಥಿಗಳಾದ ಲಕ್ಷ್ಮೀಕಾಂತ್ ಪರ್ಸೇಕರ್ ಮಾಂಡ್ರೆಮ್‌ನಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಮಾಂಡ್ರೆಮ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೋವಾದ ಮಾಜಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್, ಯಾವ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಮಾನ ಅಂತರದಲ್ಲಿ ಮುನ್ನಡೆ ಸಾಧಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:Goa Result: ಹಿನ್ನಡೆಯಲ್ಲಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್​ಗೆ 130 ಮತಗಳ ಮುನ್ನಡೆ

ಇದರ ಜೊತೆಗೆ ನಾನು ಎಂದಿಗೂ ಕಾಂಗ್ರೆಸ್‌ನೊಂದಿಗೆ ಇರಲಿಲ್ಲ ಮತ್ತು ಬಿಜೆಪಿ ನನಗೆ ಮೋಸ ಮಾಡಿಲ್ಲ. ನಾನು ಎರಡೂ ಪಕ್ಷಗಳಿಂದ ಸಮಾನ ದೂರದಲ್ಲಿದ್ದೇನೆ ಮತ್ತು ನಾನು ಗೆದ್ದರೆ ಗೋವಾದ ಹಿತಾಸಕ್ತಿಯ ಬಗ್ಗೆ ಯೋಚಿಸುತ್ತೇನೆ ಎಮದು ಪರ್ಸೇಕರ್ ಹೇಳಿದ್ದು, ಈಗ ಅವರು ಮುನ್ನಡೆ ಸಾಧಿಸಿದ್ದಾರೆ.

ABOUT THE AUTHOR

...view details