ಕರ್ನಾಟಕ

karnataka

ಜಾತಿಗಣತಿ ತಡೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಸಂಜಯ್ ಕರೋಲ್

By

Published : May 17, 2023, 7:52 PM IST

ಜಾತಿ ಆಧಾರಿತ ಜನಗಣತಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಪಾಟ್ನಾ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾ. ಸಂಜಯ್​ ಕರೋಲ್​ ಹಿಂದೆ ಸರಿದಿದ್ದಾರೆ.

ಸುಪ್ರೀಂ ಕೋರ್ಟ್​
ಸುಪ್ರೀಂ ಕೋರ್ಟ್​

ಬಿಹಾರ : ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಮಧ್ಯಂತರ ತಡೆಯಾಜ್ಞೆ ನೀಡಿರುವ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರು ಹಿಂದೆ ಸರಿದಿದ್ದಾರೆ. ಈ ಪ್ರಕರಣವನ್ನು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಸಂಜಯ್ ಕರೋಲ್‌ಗೆ ವಿಚಾರಣೆ ನಡೆಸಬೇಕಿತ್ತು. ರಾಜ್ಯದಲ್ಲಿ ಜಾತಿ ಆಧಾರಿತ ಜನಗಣತಿಗೆ ಮಧ್ಯಂತರ ತಡೆ ನೀಡಿರುವ ಪಾಟ್ನಾ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಹಿಂದೆ ಸರಿಯಲು ಕಾರಣವೇನು?:ನ್ಯಾಯಮೂರ್ತಿ ಕರೋಲ್ ಅವರು ಈ ಹಿಂದೆ ಪಾಟ್ನಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು, ನಂತರ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಹೀಗಾಗಿ ತಾವು ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಕರೋಲ್​ ಸ್ಪಷ್ಟಪಡಿಸಿದ್ದಾರೆ

2023ರ ಜನವರಿಯಲ್ಲಿ, ನ್ಯಾಯಮೂರ್ತಿ ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಜಾತಿ ಗಣತಿಯನ್ನು ಪ್ರಾರಂಭಿಸುವ ರಾಜ್ಯದ ನಿರ್ಧಾರವನ್ನು ಪ್ರಶ್ನಿಸಿ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಲು ನಿರಾಕರಿಸಿತ್ತು. ಆದರೆ ಈ ಸಂಬಂಧ ನೀವು ನಿಮ್ಮದೇ ರಾಜ್ಯದ ಹೈಕೋರ್ಟ್​ನಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆ ಮಾಡಿ ಪ್ರಶ್ನೆ ಮಾಡಬಹುದು ಎಂದು ಹೇಳಿತ್ತು.

ಇದನ್ನೂ ಓದಿ:ಜಾತಿ ಜನಗಣತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪಾಟ್ನಾ ಹೈಕೋರ್ಟ್‌.. ನಾಳೆ ಮಧ್ಯಂತರ ಆದೇಶ

ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಜನಗಣತಿ ಕಾನೂನು ಬಾಹಿರ, ಇದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿ ಪಾಟ್ನಾ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇನ್ನು ಪಟ್ನಾ ಹೈಕೋರ್ಟ್ ಮೇ 9 ರಂದು ಬಿಹಾರ ರಾಜ್ಯ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತ್ತು. ಬಿಹಾರ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಮುಖ್ಯ ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ನೇತೃತ್ವದ ಪೀಠವು ಈ ವಿಷಯದಲ್ಲಿ ಯಾವುದೇ ತುರ್ತು ಇಲ್ಲ ಮತ್ತು ಜುಲೈ 3 ರಂದು ಅರ್ಜಿಗಳ ವಿಚಾರಣೆ ನಡೆಯಲಿದೆ ಎಂದು ಹೇಳಿತ್ತು.

ಮೇಲ್ನೋಟಕ್ಕೆ ಜಾತಿ ಆಧಾರಿತ ಸಮೀಕ್ಷೆಯನ್ನು ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಹೈಕೋರ್ಟ್ ಹೇಳಿತ್ತು. ಆಡಳಿತ ಮತ್ತು ವಿರೋಧ ಪಕ್ಷ ಸೇರಿದಂತೆ ರಾಜ್ಯ ವಿಧಾನಸಭೆಯ ವಿವಿಧ ಪಕ್ಷಗಳ ನಾಯಕರೊಂದಿಗೆ ದತ್ತಾಂಶವನ್ನು ಹಂಚಿಕೊಳ್ಳಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ 'ಅತ್ಯಂತ ಕಳವಳ' ವ್ಯಕ್ತಪಡಿಸಿದ ಹೈಕೋರ್ಟ್, ಜಾತಿ ಆಧಾರಿತ ಸಮೀಕ್ಷೆಯನ್ನು ತಕ್ಷಣವೇ ನಿಲ್ಲಿಸಲು ಮತ್ತು ಖಚಿತಪಡಿಸಿಕೊಳ್ಳಲು ರಾಜ್ಯಕ್ಕೆ ಆದೇಶಿಸಿತ್ತು.

ಬಿಹಾರ ರಾಜ್ಯದಲ್ಲಿ ಪ್ರಸ್ತುತ ನಡೆಸಲಾಗುತ್ತಿರುವ ಎರಡನೇ ಹಂತದ ಜಾತಿ ಗಣತಿಗೆ ಜುಲೈ 3ರ ವರೆಗೆ ನಡೆಸದಂತೆ ತಡೆಯಾಜ್ಞೆ ನೀಡಿತ್ತು. ಹೈಕೋರ್ಟ್​ನ ಈ ಆದೇಶ ಪ್ರಶ್ನಿಸಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.

ಇದನ್ನೂ ಓದಿ:ಜಾತಿ ಗಣತಿ ತಡೆ ವಿಚಾರ.. ಶೀಘ್ರ ವಿಚಾರಣೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ ಬಿಹಾರ ಸರ್ಕಾರ

ABOUT THE AUTHOR

...view details