ಕರ್ನಾಟಕ

karnataka

ಭಾರಿ ಮಳೆಗೆ ತತ್ತರಿಸಿದ ದೇವರನಾಡು : ಧರೆಗುರುಳಿದ ಮನೆಗಳು, ಉಕ್ಕಿ ಹರಿಯುತ್ತಿರುವ ನದಿಗಳು

By

Published : Oct 12, 2021, 6:19 PM IST

ಭಾರೀ ಮಳೆಗೆ ತತ್ತರಿಸಿದ ದೇವರನಾಡು

ಕೋಯಿಕ್ಕೊಡ್​​ನಲ್ಲಿ ನಾಲ್ಕು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪ್ರಸಿದ್ಧ ಆಲುವಾ ಶಿವನ ದೇವಸ್ಥಾನ ಮುಳುಗಡೆಯಾಗಿದೆ. ಎರನಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿರುವುದರ ಬಗ್ಗೆ ವರದಿಯಾಗಿವೆ..

ತಿರುವನಂತಪುರಂ :ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕೇರಳ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಗೆ ಮಲಪ್ಪುರಂನಲ್ಲಿ ಮನೆ ಕುಸಿದು ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಭಾರಿ ಮಳೆಗೆ ತತ್ತರಿಸಿದ ದೇವರನಾಡು..

ಕೇಂದ್ರ ಜಲ ಆಯೋಗವು ತಮಿಳುನಾಡು ಮತ್ತು ಕರ್ನಾಟಕ, ಕೇರಳ ರಾಜ್ಯಗಳಲ್ಲಿ ಪ್ರವಾಹದ ಮೂನ್ಸೂಚನೆ ನೀಡಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ರಾಜ್ಯದ ಹಲವಾರು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ.

ಈ ಮಳೆಯಿಂದ ಅಪಾರ ಪ್ರಮಾಣದ ಕೃಷಿ ಭೂಮಿ ಮತ್ತು ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದೆ. ಬಿಟ್ಟು ಬಿಡದೇ ಭಾರಿ ಮಳೆಯಾಗುತ್ತಿರುವ ಪರಿಣಾಮ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಅನೇಕ ಅಣೆಕಟ್ಟುಗಳ ಮೂಲಕ ನೀರು ಹೊರ ಬಿಡಲಾಗುತ್ತಿದೆ.

ನದಿಗಳು ತುಂಬಿ ಹರಿಯುತ್ತಿವೆ. ಹೀಗೆ ಮಳೆ ಮುಂದುವರಿದರೆ ಹೆಚ್ಚಿನ ಅಣೆಕಟ್ಟುಗಳ ಗೇಟ್​​ಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋಯಿಕ್ಕೋಡ್‌ನಲ್ಲಿ ಇರುವಂಜಿ ಮತ್ತು ಚಲಿಯಾರ್ ನದಿಗಳು ತುಂಬಿ ಹರಿಯುತ್ತಿವೆ. ನದಿ ತೀರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.

ಕೋಯಿಕ್ಕೊಡ್​​ನಲ್ಲಿ ನಾಲ್ಕು ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ. ಪೆರಿಯಾರ್ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಪ್ರಸಿದ್ಧ ಆಲುವಾ ಶಿವನ ದೇವಸ್ಥಾನ ಮುಳುಗಡೆಯಾಗಿದೆ. ಎರನಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿರುವುದರ ಬಗ್ಗೆ ವರದಿಯಾಗಿವೆ.

ABOUT THE AUTHOR

...view details