ದೇಶದಲ್ಲಿ ಕೊರೊನಾ ಮಹಾಮಾರಿ ಮೂರನೇ ಅಲೆ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತ ಪ್ರಕರಣಗಳ ಸಂಖ್ಯೆ ದ್ವಿಗುಣಗೊಳ್ಳುತ್ತಿದೆ. ಪ್ರಮುಖವಾಗಿ ಮೆಟ್ರೋ ಸಿಟಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಪ್ರಮುಖವಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಇಂದು ದಾಖಲೆಯ 20,181 ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ನಿನ್ನೆಗೆ ಹೋಲಿಕೆ ಮಾಡಿದಾಗ ಮುಂಬೈನಲ್ಲಿ ಶೇ. 25ರಷ್ಟು ಹೆಚ್ಚಿನ ಪ್ರಕರಣ ಕಾಣಿಸಿಕೊಂಡಿವೆ.
ಇದನ್ನೂ ಓದಿ: ದೇಶಾದ್ಯಂತ ಸಾವಿರಕ್ಕೂ ಹೆಚ್ಚು ವೈದ್ಯರಿಗೆ ಕೋವಿಡ್ ಸೋಂಕು
ದೆಹಲಿಯಲ್ಲಿ 15,097 ಕೊರೊನಾ ಪ್ರಕರಣ ಕಾಣಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಶೆ. 15.34ರಷ್ಟಿದೆ. ಕಳೆದ ಎರಡು ದಿನಗಳ ಹಿಂದೆ ರಾಷ್ಟ್ರ ರಾಜಧಾನಿಯಲ್ಲಿ 5 ಸಾವಿರ ಪ್ರಕರಣ ದಾಖಲಾಗಿದ್ದವು. ಇದೀಗ ಈ ವೇಗ ದುಪ್ಪಟ್ಟಾಗಿದೆ.