ಕರ್ನಾಟಕ

karnataka

ದೇಶದಲ್ಲಿ ಹೊಸದಾಗಿ 16,862 ಕೊರೊನಾ ಕೇಸ್​, 379 ಮಂದಿ ಸಾವು

By

Published : Oct 15, 2021, 11:11 AM IST

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16 ಸಾವಿರ ಕೋವಿಡ್‌ ಪ್ರಕರಣಗಳು ಕಂಡುಬಂದಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

India reports 16,862 new COVID cases
ದೇಶದಲ್ಲಿ ಹೊಸದಾಗಿ 16 ಸಾವಿರಕ್ಕೂ ಹೆಚ್ಚು ಕೊರೊನಾ ಕೇಸ್​, 379 ಮಂದಿ ಸಾವು

ನವದೆಹಲಿ:ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 16,862 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 19,391 ಮಂದಿ ಚೇತರಿಸಿಕೊಂಡು, 379 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 3,40,37,592 ಕ್ಕೆ ತಲುಪಿದೆ. ಒಟ್ಟು ಸೋಂಕಿತರಲ್ಲಿ 2,03,678 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 3,33,82,100 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆಯ ಪ್ರಮಾಣವು ಶೇಕಡಾ 98.07 ಎಂದು ವರದಿಯಾಗಿದೆ. ಈವರೆಗೆ 4,51,814 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ವ್ಯಾಕ್ಸಿನೇಷನ್: ಈವರೆಗೆ ರಾಷ್ಟ್ರಾದ್ಯಂತ ಸುಮಾರು 97,14,38,553 ಕೋವಿಡ್ ಲಸಿಕೆಯ ಡೋಸ್​ ವಿತರಣೆ ಮಾಡಲಾಗಿದೆ. ನಿನ್ನೆ ಒಂದೇ ದಿನ 30,26,483 ಮಂದಿಗೆ ವ್ಯಾಕ್ಸಿನ್ ನೀಡಲಾಗಿದೆ.

ಸೋಂಕು ಪರೀಕ್ಷೆ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಪ್ರಕಾರ ಕಳೆದ 24 ಗಂಟೆಗಳಲ್ಲಿ 11 ಲಕ್ಷಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದುವರೆಗೆ ದೇಶದಲ್ಲಿ ಒಟ್ಟು 58.88 ಕೋಟಿ ಸೋಂಕು ಪರೀಕ್ಷೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ:2024ರ ಲೋಕಸಭಾ ಚುನಾವಣೆ ವೇಳೆಗೆ ರಾಮಮಂದಿರ ಪೂರ್ಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ABOUT THE AUTHOR

...view details