ನವದೆಹಲಿ: ಕಳೆದೊಂದು ದಿನದಲ್ಲಿ ದೇಶದಲ್ಲಿ 2,59,591 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 4,209 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 3,57,295 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗಿನ ಅಂಕಿ-ಅಂಶ:
ದೇಶದಲ್ಲಿ ಈವರೆಗೆ ಒಟ್ಟು 2,60,31,991 ಕೊರೊನಾ ಪ್ರಕರಣಗಳು ದಾಖಲಾಗಿವೆ. 2,27,12,735 ಸೋಂಕಿತರು ಗುಣಮುಖರಾಗಿದ್ದಾರೆ. 2,91,331 ಸುಮಾರು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 30,27,925 ಸಕ್ರಿಯ ಕೋವಿಡ್ ಪ್ರಕರಣಗಳಿವೆ.