ಕರ್ನಾಟಕ

karnataka

ಅಪ್ರಾಪ್ತೆಯನ್ನು ಮದುವೆಯಾದ 50 ವರ್ಷದ ವ್ಯಕ್ತಿಗಾಗಿ ಪೊಲೀಸರ ಹುಟುಕಾಟ

By

Published : Feb 28, 2021, 4:02 PM IST

ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಆಕೆಯನ್ನು ಮದುವೆಯಾದ ಘಟನೆ ಬೆಳಕಿಗೆ ಬಂದಿದೆ. ಈತನ ಮೇಲೆ ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Minor was married to 50 years old man forcibly for Rs.10 thousand
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ

ನೆಲ್ಲೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಬಳಿಕ ಆಕೆಯನ್ನು ಮದುವೆಯಾದ ವ್ಯಕ್ತಿಗಾಗಿ ಆಂಧ್ರಪ್ರದೇಶ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮೂರು ದಿನಗಳ ಹಿಂದೆ ನೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೊಕ್ಸೊ) ಅಡಿಯಲ್ಲಿ 50 ವರ್ಷದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ನಾಗರಾಜು ತಿಳಿಸಿದ್ದಾರೆ.

ಚಿನ್ನಾ ಸುಬ್ಬಯ್ಯ ಎಂಬ ವ್ಯಕ್ತಿಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ನೆಲ್ಲೂರು ನಗರದ ಕೊಟ್ಟೂರಿನಿಂದ ಬಂದ ಶಂಕಿತ ವ್ಯಕ್ತಿ, ಅಪ್ರಾಪ್ತೆಯನ್ನು ಧಂಪೂರ್ ಗ್ರಾಮಕ್ಕೆ ಕರೆದೊಯ್ದು, ಅಲ್ಲಿ ಅವಳ ಮೇಲೆ ದೌರ್ಜನ್ಯ ನಡೆಸಿದ್ದಾನೆ ಎಂದು ಅಧಿಕಾರಿ ಹೇಳಿದ್ದಾರೆ.

ಓದಿ:ಗೆಳತಿ ಭೇಟಿಯಾಗಲು ಹೋದ ದಲಿತ ವ್ಯಕ್ತಿಗೆ ಥಳಿತ, ಯುವಕ ಸಾವು : ಐವರ ಬಂಧನ

ಇದನ್ನು ಮನಗಂಡ ಸ್ಥಳೀಯರು ಬಾಲಕಿಯನ್ನು ರಕ್ಷಿಸಿದ್ದು, ಬಳಿಕ ಪೊಲೀಸರು ಆಕೆಯನ್ನು ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‌ಮೆಂಟ್ ಸರ್ವೀಸಸ್ (ಐಸಿಡಿಎಸ್) ಮನೆಗೆ ಕಳುಹಿಸಿದ್ದಾರೆ.

ಬಾಲಕಿಯ ಪೋಷಕರು ತಮ್ಮ ಹಿರಿಯ ಮಗಳ ವೈದ್ಯಕೀಯ ಚಿಕಿತ್ಸೆಗೆ ಹಣ ಬೇಕಾದ ಹಿನ್ನೆಲೆ ಕಿರಿಯ ಮಗಳಿಗೆ ಕಾನೂನು ಬಾಹಿರವಾಗಿ ಐವತ್ತು ವರ್ಷದ ವ್ಯಕ್ತಿಯೊಂದಿಗೆ ವಿವಾಹ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ABOUT THE AUTHOR

...view details