ಕರ್ನಾಟಕ

karnataka

'ನಿಮ್ಮ ಮಕ್ಕಳ ಮೇಲೆ ನೀವು ಲಾಠಿ ಬೀಸ್ತೀರಾ'.. ಯೋಗಿ ಸರ್ಕಾರದ ವಿರುದ್ಧ ಸಂಸದ ವರುಣ್​ ಗಾಂಧಿ ಮತ್ತೆ ಗರಂ

By

Published : Dec 5, 2021, 4:06 PM IST

'ನಿಮ್ಮ ಮಕ್ಕಳನ್ನು ನೀವು ಇದೇ ರೀತಿ ನಡೆಸಿಕೊಳ್ಳುತ್ತೀರಾ?' ಎಂದು ಪ್ರಶ್ನಿಸಿರುವ ವರುಣ್​ ಗಾಂಧಿ, 'ನೀವು ಯಾರ ಮೇಲೆ ಲಾಠಿ ಬೀಸಿದ್ದೀರೋ ಅವರು ಕೂಡ ಈ ದೇಶದ ಭಾರತ ಮಾತೆಯ ಮಕ್ಕಳು ಎಂಬುದನ್ನು ಮರೆಯಬೇಡಿ' ಎಂದು ಬಿಜೆಪಿ ಸಂಸದ ವರುಣ್​ ಗಾಂಧಿ ಟೀಕೆ ಮಾಡಿದ್ದಾರೆ.

Varun Gandhi
ಬಿಜೆಪಿ ಸಂಸದ ವರುಣ್​ ಗಾಂಧಿ

ಪಿಲಿಭಿತ್​(ಉತ್ತರಪ್ರದೇಶ):ಉತ್ತರಪ್ರದೇಶದ ಯೋಗಿ ಆದಿತ್ಯನಾಥ್​ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್​ ಗಾಂಧಿ ಟೀಕಾಪ್ರಹಾರ ಮುಂದುವರಿಸಿದ್ದಾರೆ.

ಯುಪಿಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ನೇಮಕಾತಿಗಾಗಿ ಒತ್ತಾಯಿಸಿ ಮೇಣದಬತ್ತಿ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿರುವ ವರುಣ್​ಗಾಂಧಿ ಪೊಲೀಸರು ಮತ್ತು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಅಲ್ಲದೇ, 'ನಿಮ್ಮ ಮಕ್ಕಳನ್ನು ನೀವು ಇದೇ ರೀತಿ ನಡೆಸಿಕೊಳ್ಳುತ್ತೀರಾ?' ಎಂದು ಪ್ರಶ್ನಿಸಿರುವ ವರುಣ್​ ಗಾಂಧಿ, 'ನೀವು ಯಾರ ಮೇಲೆ ಲಾಠಿ ಬೀಸಿದ್ದೀರೋ ಅವರು ಕೂಡ ಈ ದೇಶದ ಭಾರತ ಮಾತೆಯ ಮಕ್ಕಳು ಎಂಬುದನ್ನು ಮರೆಯಬೇಡಿ' ಎಂದು ಕಿಡಿಕಾರಿದ್ದಾರೆ.

ಇದಲ್ಲದೇ, ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಹ ಉದ್ಯೋಗಾಂಕ್ಷಿಗಳನ್ನು ಯಾಕೆ ನೇಮಕ ಮಾಡುತ್ತಿಲ್ಲ' ಎಂದು ಯೋಗಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೆಹಲಿಯಿಂದ ನ್ಯೂಜೆರ್ಸಿಗೆ ತೆರಳುತ್ತಿದ್ದ ಏರ್​ ಇಂಡಿಯಾ ವಿಮಾನದಲ್ಲಿ ಹೃದಯಾಘಾತದಿಂದ ವೃದ್ಧ ಸಾವು

ಉತ್ತರಪ್ರದೇಶದ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ 22 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಉದ್ಯೋಗಾಕಾಂಕ್ಷಿಗಳು ಲಕ್ನೋದಲ್ಲಿರುವ ಬಿಜೆಪಿ ಕಚೇರಿಯನ್ನು ಮುತ್ತಿಗೆ ಹಾಕಿದ್ದರು. ಈ ವೇಳೆ ಪೊಲೀಸರು ಲಾಠಿ ಚಾರ್ಜ್​ ಮಾಡಿದ್ದರು.

ಈ ಹಿಂದೆಯೂ ಕೂಡ ಬಿಜೆಪಿ ಸಂಸದ ವರುಣ್​ ಗಾಂಧಿ ಲಖೀಂಪುರ ಹಿಂಸಾಚಾರ, ಕೃಷಿ ಕಾಯ್ದೆಗಳ ಹಿಂಪಡೆಯುವಿಕೆ ಕುರಿತು, ರೈತರ ಹೋರಾಟ ಬೆಂಬಲಿಸಿ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು.

ABOUT THE AUTHOR

...view details