ಕರ್ನಾಟಕ

karnataka

ಭುವನೇಶ್ವರದಿಂದ ದೆಹಲಿಗೆ ತೆರಳಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು: ಶುಕ್ರವಾರ ನಾಮಪತ್ರ ಸಲ್ಲಿಕೆ

By

Published : Jun 23, 2022, 10:43 AM IST

Updated : Jun 23, 2022, 12:01 PM IST

NDA's Presidential candidate Draupadi Murmu
NDA's Presidential candidate Draupadi Murmu

9.40 ಕ್ಕೆ ಭುವನೇಶ್ವರ ವಿಮಾನ ನಿಲ್ದಾಣದಿಂದ ದೆಹಲಿಗೆ ವಿಮಾನ ಪ್ರಯಾಣ ಬೆಳೆಸಿದೆ. ಮುರ್ಮು ಅವರಿಗೆ ಕೇಂದ್ರ ಸರ್ಕಾರ ಈಗಾಗಲೇ ಝಡ್ ಪ್ಲಸ್ ಭದ್ರತೆ ಒದಗಿಸಿದೆ. ಭುವನೇಶ್ವರ್‌ನ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನರಿಗೆ ಶುಭಾಶಯಗಳನ್ನು ತಿಳಿಸಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಭುವನೇಶ್ವರ (ಒಡಿಶಾ): ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ಭುವನೇಶ್ವರದಿಂದ ದೆಹಲಿಗೆ ತೆರಳಿದ್ದಾರೆ. ನಾಳೆ ಅವರು ರಾಷ್ಟ್ರಪತಿ ಚುನಾವಣೆಗಾಗಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ನಡೆಯಲಿದೆ. ದೇಶದ ಉನ್ನತ ಸಾಂವಿಧಾನಿಕ ಹುದ್ದೆಗೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಆಯ್ಕೆ ಆಗಿದ್ದು, ಅವರ ವಿರುದ್ಧ ಮುರ್ಮು ಚುನಾವಣಾ ಹೋರಾಟ ನಡೆಸಲಿದ್ದಾರೆ.

ಭುವನೇಶ್ವರದಿಂದ ದೆಹಲಿಗೆ ತೆರಳಿದ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು

9.40 ಕ್ಕೆ ಭುವನೇಶ್ವರ ವಿಮಾನ ನಿಲ್ದಾಣದಿಂದ ದೆಹಲಿಗೆ ವಿಮಾನ ಪ್ರಯಾಣ ಬೆಳೆಸಿದೆ. ಮುರ್ಮು ಅವರಿಗೆ ಕೇಂದ್ರ ಸರ್ಕಾರ ಈಗಾಗಲೇ ಝಡ್ ಪ್ಲಸ್ ಭದ್ರತೆ ಒದಗಿಸಿದೆ. ಭುವನೇಶ್ವರ್‌ನ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನರಿಗೆ ಶುಭಾಶಯಗಳನ್ನು ತಿಳಿಸಲು ವಿಶೇಷ ವ್ಯವಸ್ಥೆ ಕೂಡಾ ಮಾಡಲಾಗಿತ್ತು.

ಇದನ್ನು ಓದಿ:ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಬಳಿಕ ರಾಷ್ಟ್ರಪತಿಗಳಾದವರು ಯಾರ‍್ಯಾರು?

Last Updated :Jun 23, 2022, 12:01 PM IST

TAGGED:

ABOUT THE AUTHOR

...view details