ಕರ್ನಾಟಕ

karnataka

ಲಖಿಂಪುರ್ ಖೇರಿ ಹಿಂಸಾಚಾರ ಕೇಸ್.. ಉತ್ತರಪ್ರದೇಶ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಸುಪ್ರೀಂ

By

Published : Oct 8, 2021, 4:13 PM IST

Updated : Oct 8, 2021, 4:20 PM IST

ಅಕ್ಟೋಬರ್​ 3 ರಂದು ನಡೆದ ಲಖಿಂಪುರ್​ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಯೋಗಿ ಆದಿತ್ಯನಾಥ್ ಸರ್ಕಾರ ತೆಗೆದುಕೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸುಪ್ರೀಂ
ಸುಪ್ರೀಂ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಉತ್ತರಪ್ರದೇಶ ಸರ್ಕಾರ ತೆಗೆದುಕೊಂಡ ಕ್ರಮ ತೃಪ್ತಿದಾಯಕವಾಗಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ಅಕ್ಟೋಬರ್​ 3 ರಂದು ನಡೆದ ಲಖಿಂಪುರ್​ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ಯೋಗಿ ಆದಿತ್ಯನಾಥ್ ಸರ್ಕಾರ ತೆಗೆದುಕೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅಲ್ಲದೇ, ಎಫ್​​ಐಆರ್​ನಲ್ಲಿ ದಾಖಲಿಸಿರುವ ಆರೋಪಿಗಳನ್ನು ಈವರೆಗೆ ಯಾಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದೆ.

ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಗಳನ್ನು ನಾಶ ಪಡಿಸಿಲ್ಲವೇ ಎಂಬುದನ್ನು ಉತ್ತರಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಬೇಕು ಎಂದು ಯುಪಿ ಸರ್ಕಾರ ಪ್ರತಿನಿಧಿಸುವ ಹಿರಿಯ ವಕೀಲ ಹರೀಶ್ ಸಾಳ್ವೆಗೆ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾಯಪೀಠ ಹೇಳಿದೆ.

ಐಪಿಸಿ ಸೆಕ್ಷನ್​302 (ಕೊಲೆ)ರಡಿ ದಾಖಲಾಗಿರುವ ಇತರ ಪ್ರಕರಣಗಳನ್ನು ಹೀಗೆಯೇ ಪರಿಗಣಿಸುತ್ತೀರಾ? ಎಂದು ರಾಜ್ಯ ಸರ್ಕಾರವನ್ನು ನ್ಯಾಯಪೀಠ ಪ್ರಶ್ನಿಸಿದೆ. ಎಫ್​ಐಆರ್​ನಲ್ಲಿ ಸೆಕ್ಷನ್ 302 ರಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ. ಅಲ್ಲದೇ, ಅಕ್ಟೋಬರ್ 20 ರಂದು ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಕಾರೊಂದು ಪ್ರತಿಭಟನಾಕಾರರತ್ತ ನುಗ್ಗಿದೆ. ಈ ಸಮಯದಲ್ಲಿ ನಾಲ್ವರು ರೈತರು ಮೃತಪಟ್ಟಿದ್ದರು. ಈ ವೇಳೆ ಪ್ರತಿಭಟನಾಕಾರರು ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಕಾರು ಚಾಲಕನನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಪತ್ರಕರ್ತನೂ ಕೊಲೆಯಾಗಿದ್ದಾನೆ.

ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತು ಇತರರ ವಿರುದ್ಧ ಟಿಕೊನಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಪೊಲೀಸರು ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

ಪ್ರತಿಭಟನಾಕಾರರನ್ನು ಹೊಡೆದುರುಳಿಸಿದ ಕಾರುಗಳಲ್ಲಿ ಆಶಿಶ್ ಇದ್ದರು ಎಂದು ರೈತ ಮುಖಂಡರು ಆರೋಪಿಸಿದ್ದು, ಸಚಿವರು ಆರೋಪಗಳನ್ನು ನಿರಾಕರಿಸಿದ್ದಾರೆ.

Last Updated :Oct 8, 2021, 4:20 PM IST

ABOUT THE AUTHOR

...view details