ಕರ್ನಾಟಕ

karnataka

ಒಂದು ಕೋವಿಡ್ ಡೋಸ್​ನಿಂದ ಶೇ.82ರಷ್ಟು ಮರಣ ಪ್ರಮಾಣ ಇಳಿಕೆ

By

Published : Jul 16, 2021, 6:53 PM IST

ಇದಕ್ಕೂ ಮೊದಲು ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ, ಕೇರಳದ ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮೂರನೇ ಅಲೆಯ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದರು..

One dose of vaccine was able to reduce the mortality rate
ಒಂದು ಕೋವಿಡ್ ಡೋಸ್​ನಿಂದ ಶೇಕಡಾ 82ರಷ್ಟು ಮರಣ ಪ್ರಮಾಣ ಇಳಿಕೆ

ನವದೆಹಲಿ :ಕೋವಿಡ್ ವ್ಯಾಕ್ಸಿನ್​ನ ಒಂದು ಡೋಸ್​ಗೆ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಸಾಮರ್ಥ್ಯವಿದೆ. ಕೊರೊನಾ 2ನೇ ಅಲೆಯಲ್ಲಿ ಶೇ.82ರಷ್ಟು ಮರಣ ಪ್ರಮಾಣ ಕಡಿಮೆಯಾಗಿದೆ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ ಕೆ ಪೌಲ್ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಕೋವಿಡ್ ಸ್ಥಿತಿಗತಿಗಳ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೌಲ್, ಕೋವಿಡ್ ಎರಡನೇ ಅಲೆಯಲ್ಲಿ ಶೇ.95ರಷ್ಟು ಸಾವುಗಳನ್ನು ತಡೆಯುವಲ್ಲಿ ಕೋವಿಡ್​ ವ್ಯಾಕ್ಸಿನ್​ನ ಎರಡನೇ ಡೋಸ್ ಸಾಕಷ್ಟು ಪರಿಣಾಮ ಬೀರಿದೆ ಎಂದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಮಾತನಾಡಿದ್ದು, ದೇಶದ 73 ಜಿಲ್ಲೆಗಳಲ್ಲಿ ದಿನಕ್ಕೆ ನೂರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. 47 ಜಿಲ್ಲೆಗಳಲ್ಲಿ ದಿನಕ್ಕೆ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಕಡಿಮೆಯಿದೆ ಎಂದಿದ್ದಾರೆ.

ಇದಕ್ಕೂ ಮೊದಲು ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟ್ರ, ಕೇರಳದ ಮುಖ್ಯಮಂತ್ರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಮೂರನೇ ಅಲೆಯ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದರು.

ಇದನ್ನೂ ಓದಿ:ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್​ ಮೃತ, ಮಹಿಳಾ ಪೈಲಟ್​ ಗಂಭೀರ

ABOUT THE AUTHOR

...view details