ಕರ್ನಾಟಕ

karnataka

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಇಂದಿನ ತೈಲ ದರ ಹೀಗಿದೆ..

By

Published : Jun 22, 2022, 9:56 AM IST

Petrol Diesel Price

ಇಂದಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ...

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ.

ಇಂದಿನ ದರಗಳ ಬಗ್ಗೆ ತಿಳಿಯೋದಾದರೆ:ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ:

ನಗರಗಳು ಪೆಟ್ರೋಲ್ ಡೀಸೆಲ್
ಬೆಂಗಳೂರು 101.96 ರೂ. 87.91 ರೂ.
ಹುಬ್ಬಳ್ಳಿ 101.65 ರೂ. 87.65 ರೂ.
ಶಿವಮೊಗ್ಗ 102.59 ರೂ. 88.43 ರೂ.
ದಾವಣಗೆರೆ 103.60 ರೂ. 89.50 ರೂ.
ಮೈಸೂರು 101.44 ರೂ. 87.43 ರೂ.

ಇದನ್ನೂ ಓದಿ:ರೆಪೋ ದರ ಏರಿಕೆ.. ಠೇವಣಿದಾರರಿಗೆ ಬಂಪರ್​.. FD ಮೇಲೆ ಎಷ್ಟು ಬಡ್ಡಿ ಸಿಗುತ್ತಾ ಗೊತ್ತಾ?

ABOUT THE AUTHOR

...view details