ಕರ್ನಾಟಕ

karnataka

ಇಂದು ಮತ್ತೆ ತೈಲ ದರ ಏರಿಕೆ: ವಿಮಾನ ಇಂಧನಕ್ಕಿಂತ ದುಬಾರಿಯಾದ ಪೆಟ್ರೋಲ್

By

Published : Oct 20, 2021, 7:56 AM IST

ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 35 ಪೈಸೆಯಷ್ಟು ಹೆಚ್ಚಿಸಲಾಗಿದೆ. ದೇಶದ ಪ್ರಮುಖ ಮಹಾನಗರಗಳಲ್ಲಿ ಇಂಧನ ದರ ಹೇಗಿದೆ ನೋಡಿ.

Petrol
Petrol

ನವದೆಹಲಿ: ಈಗಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಜನರು ಅಸಮಾಧಾನಗೊಂಡಿದ್ದು, ಇಂದೂ ಸಹ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್​​ ಹಾಗೂ ಡೀಸೆಲ್​ ಮೇಲೆ ತಲಾ 35 ಪೈಸೆಯಷ್ಟು ಹೆಚ್ಚಿಸಿವೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಹೆಚ್ಚಳದೊಂದಿಗೆ ಲೀಟರ್ ಪೆಟ್ರೋಲ್ ದರ 106.19 ರೂಪಾಯಿ ಹಾಗೂ ಡೀಸೆಲ್​ ದರ 94.92 ರೂಪಾಯಿ ಇದೆ. ಗಮನಿಸಬೇಕಾದ ಅಂಶ ಅಂದ್ರೆ, ವಿಮಾನಗಳಿಗೆ ಬಳಸುವ ಟರ್ಬೈನ್ ಇಂಧನ (ಎಟಿಎಫ್ ಅಥವಾ ಜೆಟ್ ಇಂಧನ) ಬೆಲೆಗಿಂತ ಪೆಟ್ರೋಲ್ ಈಗ ಶೇಕಡಾ 34 ರಷ್ಟು ಹೆಚ್ಚಾಗಿದೆ. ದೆಹಲಿಯಲ್ಲಿ ಎಟಿಎಫ್ ಬೆಲೆ ಪ್ರತಿ ಲೀಟರ್‌ಗೆ 79 ಇದೆ.

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ ರೂ.112.11 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 102.89 ರೂ. ಗೆ ಏರಿಕೆಯಾಗಿದೆ.

ಇಂದಿನ ತೈಲ ದರದ ಮಾಹಿತಿ

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 109.89ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 100.75 ರೂ. ಗೆ ಏರಿಕೆಯಾಗಿದೆ. ಕೋಲ್ಕತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 106.77ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 98.03 ರೂ. ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ಗೆ ಪೆಟ್ರೋಲ್​ಗೆ 103.32 ರೂ. ಇದ್ದು, ಲೀಟರ್ ಡೀಸೆಲ್ 99.27 ಕ್ಕೆ ಲಭ್ಯವಿದೆ.

ಮುಂಬೈ ಮಾತ್ರವಲ್ಲದೆ ಬೆಂಗಳೂರಿನಲ್ಲಿ ಸಹ ಡೀಸೆಲ್​ ಬೆಲೆ ಸಹ ನೂರರ ಗಡಿ ದಾಟಿದ್ದು, ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.

ABOUT THE AUTHOR

...view details