ಪುದುಚೇರಿ:ಕಳೆದ ಶನಿವಾರ ಪ್ರವಾಸಿ ಮಹಿಳೆಯೊಬ್ಬರು ಧರಿಸಿದ್ದ ಬಟ್ಟೆಯ ಬಗ್ಗೆ ಪೊಲೀಸ್ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿ ವಿವಾದ ಉಂಟಾದ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪುದುಚೇರಿಯ ಬೀಚ್ ರಸ್ತೆ, ಅರವಿಂದ ಆಶ್ರಮ, ಆರೋವಿಲ್ಲೆ ಪ್ರವಾಸಿಗರ ನೆಚ್ಚಿನ ತಾಣಗಳಾಗಿವೆ. ಇಲ್ಲಿಗೆ ಬೆಂಗಳೂರು, ತಮಿಳುನಾಡು, ಕೇರಳ ಸೇರಿದಂತೆ ದೇಶದ ನಾನಾ ಭಾಗಗಳಿಂದ ಪ್ರವಾಸಿಗರು ಭೇಟಿ ನೀಡುವುದು ಸಾಮಾನ್ಯ. ಕಳೆದ ಶನಿವಾರ (ಫೆ.26)ದಂದು ಮಹಿಳೆಯರ ಬಟ್ಟೆಯ ಬಗ್ಗೆ ಪೊಲೀಸ್ ಸಿಬ್ಬಂದಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದು ವಿವಾದ ಹುಟ್ಟು ಹಾಕಿತ್ತು.
ಪುದುಚೇರಿಯಲ್ಲಿ ಪ್ರವಾಸಿ ಮಹಿಳೆಯ ದಿರಿಸಿನ ಬಗ್ಗೆ ಪೊಲೀಸ್ ಆಕ್ಷೇಪ ವಿಡಿಯೋದಲ್ಲಿರುವಂತೆ ಪ್ರವಾಸಿ ಮಹಿಳೆಯೊಬ್ಬರು ಮಾಡರ್ನ್ ಡ್ರೆಸ್ ಹಾಕಿಕೊಂಡು ಅರವಿಂದ ಆಶ್ರಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸರು ಮಹಿಳೆಯ ಬಟ್ಟೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸ್ಥಳದಲ್ಲಿ ಅಂತಹ ಬಟ್ಟೆಗಳನ್ನು ಹಾಕಿಕೊಳ್ಳಬಾರದು ಎಂದು ಹೇಳುತ್ತಿರುವುದು ವಿಡಿಯೋದಲ್ಲಿದೆ.
ಇದಕ್ಕೆ ಅಸಮಾಧಾನಗೊಂಡ ಮಹಿಳೆ ತನ್ನ ದಿರಿಸಿನ ಬಗ್ಗೆ ಸಮರ್ಥಿಸಿಕೊಂಡಿದ್ದಾರೆ. ಇದನ್ನು ಅಲ್ಲಿಯೇ ಇದ್ದ ಮತ್ತೊಬ್ಬ ಪ್ರವಾಸಿಗರು ವಿಡಿಯೋ ಮಾಡಿದ್ದಾರೆ. ಇದೀಗ ವೈರಲ್ ಆಗಿದ್ದು, ತರಹೇವಾರಿ ಕಮೆಂಟ್ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ:14 ಮಕ್ಕಳು ಸೇರಿ 352 ಮಂದಿ ಸಾವು ಎಂದ ಉಕ್ರೇನ್; ಮೊದಲ ಬಾರಿಗೆ ಪ್ರಾಣಹಾನಿ ಒಪ್ಪಿಕೊಂಡ ರಷ್ಯಾ