ಕರ್ನಾಟಕ

karnataka

ಮೋದಿ ಭೇಟಿಗೂ ಮುನ್ನ ಜೂನ್‌ನಲ್ಲಿ ರಾಹುಲ್ ಗಾಂಧಿ ಅಮೆರಿಕ ಪ್ರವಾಸ

By

Published : May 17, 2023, 8:04 AM IST

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಜೂನ್​​ ಮೊದಲ ವಾರದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Rahul Gandhi
ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂನ್ ಮೊದಲ ವಾರದಲ್ಲಿ ಯುಎಸ್‌ಎ ಭೇಟಿ ನೀಡಲಿದ್ದಾರೆ. ಜೂನ್ 4 ರಂದು ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನು (ಎನ್‌ಆರ್‌ಐ)ಗಳನ್ನು ಉದ್ದೇಶಿಸಿ ಅವರು ಮಾತನಾಡುವರು ಎಂದು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಪಕ್ಷದ ಮೂಲಗಳು ಮಂಗಳವಾರ ತಿಳಿಸಿವೆ. ಅಮೆರಿಕದಲ್ಲಿ ಒಂದು ವಾರದ ಪ್ರವಾಸದ ಅವಧಿಯಲ್ಲಿ ವಾಷಿಂಗ್ಟನ್ ಡಿಸಿ ಮತ್ತು ಲಾಸ್ ಏಂಜಲೀಸ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ.

ಜೂನ್​ 4ರಂದು ರಾಹುಲ್​ ಗಾಂಧಿ ನ್ಯೂಯಾರ್ಕ್​ನ ಮ್ಯಾಡಿಸನ್​ ಸ್ಕ್ವೇರ್​ ಗಾರ್ಡನ್​​ನಲ್ಲಿ 5 ಸಾವಿರಕ್ಕೂ ಹೆಚ್ಚು ಅನಿವಾಸಿ ಭಾರತೀಯರೊಂದಿಗೆ ರ‍್ಯಾಲಿ ನಡೆಸುವರು. ಆ ಬಳಿಕ ಸ್ಟ್ಯಾನ್​ಫೋರ್ಡ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲಿದ್ದಾರೆ. ವಾಷಿಂಗ್ಟನ್​ ಮತ್ತು ಕ್ಯಾಲಿಫೋರ್ನಿಯಾದಲ್ಲಿ ನಡೆಯಲಿರುವ ವಿವಿಧ ಸಭೆಗಳಲ್ಲಿ ರಾಹುಲ್​ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಪ್ರಜಾಪ್ರಭುತ್ವ ಅಪಾಯದಲ್ಲಿದೆ: ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್​ ಖರ್ಗೆ ವಾಗ್ದಾಳಿ

ಈ ವರ್ಷದ ಮಾರ್ಚ್‌ನಲ್ಲಿ ಲಂಡನ್​ಗೆ ಭೇಟಿ ನೀಡಿದ್ದ ರಾಹುಲ್​ ಗಾಂಧಿ ಭಾರತದಲ್ಲಿ 'ಪ್ರಜಾಪ್ರಭುತ್ವ ಅಪಾಯದಲ್ಲಿದೆ' ಎಂಬ ವಿವಾದಿತ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ತೀವ್ರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿತ್ತು. ರಾಹುಲ್​ ವಿದೇಶಿ ನೆಲದಲ್ಲಿ ಭಾರತವನ್ನು ಕೆಣಕುತ್ತಿದ್ದಾರೆ ಮತ್ತು ವಿದೇಶಿ ಹಸ್ತಕ್ಷೇಪಗಳನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಹೇಳಿಕೆಯನ್ನು ಖಂಡಿಸಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ ಸಂಸತ್​ನಲ್ಲಿ ಪ್ರತಿಭಟನೆ ನಡೆಸಿತ್ತು.

ಪ್ರಧಾನಿ ನರೇಂದ್ರ ಮೋದಿ ಜೂನ್ 22 ರಂದು ಅಮೆರಿಕಕ್ಕೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಪ್ರವಾಸಕ್ಕೂ ಮೊದಲು, ರಾಹುಲ್ ಗಾಂಧಿ ಭೇಟಿ ನಿಗದಿಯಾಗಿದೆ. ಪ್ರಧಾನಿ ಭೇಟಿ ವೇಳೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಶ್ವೇತಭವನದಲ್ಲಿ ಆತಿಥ್ಯ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಳೆದ ವಾರ ತಿಳಿಸಿತ್ತು.

ಇದನ್ನೂ ಓದಿ:ಪೆಗಾಸಸ್‌ ಮೂಲಕ ನನ್ನ ಫೋನ್‌ ಮೇಲೆ ಗೂಢಚಾರಿಕೆ; ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ: ರಾಹುಲ್ ಗಾಂಧಿ

ABOUT THE AUTHOR

...view details