ಕರ್ನಾಟಕ

karnataka

ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಆಗಮಿಸಿ ಅಭಿನಂದನೆ ಸಲ್ಲಿಸಿದ ಸೋನಿಯಾ ಗಾಂಧಿ

By

Published : Oct 19, 2022, 4:13 PM IST

ಕಾಂಗ್ರೆಸ್​ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅಭಿನಂದನೆ ತಿಳಿಸಿದ್ದಾರೆ.

outgoing-congress-president-sonia-gandhi-congratulated-mallikarjun-kharge
ನೂತನ ಅಧ್ಯಕ್ಷ ಖರ್ಗೆ ಭೇಟಿಯಾದ ಸೋನಿಯಾ ಗಾಂಧಿ, ಪ್ರಿಯಾಂಕಾ

ನವದೆಹಲಿ: ಕಾಂಗ್ರೆಸ್​ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ನಿರ್ಗಮಿತ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ಮಾಡಿ, ಅಭಿನಂದಿಸಿದ್ದಾರೆ.

ನವದೆಹಲಿಯ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದ ಸೋನಿಯಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ಪತ್ನಿ ರಾಧಾಭಾಯ್​ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಖರ್ಗೆ ಅವರ ಪುತ್ರ, ಶಾಸಕ ಪ್ರಿಯಾಂಕ್​ ಖರ್ಗೆ ಸಹ ಉಪಸ್ಥಿತರಿದ್ದರು. ಇದೇ ವೇಳೆ ಖರ್ಗೆ ಅವರ ಪತ್ನಿ ರಾಧಾಭಾಯ್ ಅವರನ್ನು ಆತ್ಮೀಯವಾಗಿ ಸೋನಿಯಾ ಗಾಂಧಿ ಅಪ್ಪಿಕೊಂಡರು.

ಇದನ್ನೂ ಓದಿ:ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಸಂಪೂರ್ಣ ಸಹಕಾರದ ಭರವಸೆ ನೀಡಿದ ಶಶಿ ತರೂರ್

ABOUT THE AUTHOR

...view details