ಕರ್ನಾಟಕ

karnataka

ಚೆನ್ನೈ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾದ ಒಂದೇ ಕುಟುಂಬದ ನಾಲ್ವರ ಬಂಧನ.. ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಪತ್ತೆ

By

Published : Aug 12, 2023, 4:04 PM IST

Chennai Airport: ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಶ್ರೀಲಂಕಾದ ಒಂದೇ ಕುಟುಂಬದ ನಾಲ್ವರ ಬಳಿ ಭಾರತದ ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿ ಇತರ ಪ್ರಮುಖ ದಾಖಲೆಗಳು ಪತ್ತೆಯಾಗಿವೆ.

Sri Lankan family detained by Immigration officials at Chennai airport for fake passports
ಚೆನ್ನೈ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾದ ಒಂದೇ ಕುಟುಂಬದ ನಾಲ್ವರ ಬಂಧನ: ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಪತ್ತೆ

ಚೆನ್ನೈ (ತಮಿಳುನಾಡು):ನಕಲಿ ಪಾಸ್‌ಪೋರ್ಟ್ ಮತ್ತು ಇತರ ದಾಖಲೆಗಳನ್ನು ಬಳಸಿ ತಮಿಳುನಾಡಿನ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಶ್ರೀಲಂಕಾದ ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ. ಪತಿ, ಪತ್ನಿ ಹಾಗೂ ಇವರ ಮಗ ಮತ್ತು ಮಗಳನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕುಟುಂಬವು ಭಾರತದ ನಕಲಿ ಪಾಸ್‌ಪೋರ್ಟ್ ಮತ್ತು ಆಧಾರ್ ಕಾರ್ಡ್ ಸೇರಿದಂತೆ ಇತರ ಪ್ರಮುಖ ದಾಖಲೆಗಳ ಮೇಲೆ ಭಾರತದಲ್ಲಿ ವಾಸಿಸುತ್ತಿದೆ ಎಂದು ಆರೋಪಿಸಲಾಗಿದೆ.

ಶ್ರೀಲಂಕಾದ ಕೊಲಂಬೊ ಮೂಲದ ರಮಲನ್ ಸಲಾಂ (33) ಎಂಬಾತ ತಮ್ಮ ಸಮೇತವಾಗಿ ಗುರುವಾರ ಬೆಳಗ್ಗೆ 10.45ಕ್ಕೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಕೂಡಲೇ ರಮಲಾನ್ ಮತ್ತು ಅವರ ಪತ್ನಿ, ಮಗ ಮತ್ತು ಮಗಳನ್ನು ವಲಸೆ ಅಧಿಕಾರಿಗಳು ತಡೆದಿದ್ದಾರೆ. ಈ ಕುಟುಂಬದ ಪ್ರಯಾಣದ ದಾಖಲೆಗಳನ್ನು ಪರಿಶೀಲಿಸಿದಾಗ ನಾಲ್ವರು ಸಹ ನಕಲಿ ಪಾಸ್‌ಪೋರ್ಟ್‌ಗಳನ್ನು ಹೊಂದಿರುವುದು ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಂತೆಯೇ, ರಮಲನ್​ ಮತ್ತು ಕುಟುಂಬ ಸದಸ್ಯರನ್ನು ವಲಸೆ ಅಧಿಕಾರಿಗಳು ವಶಕ್ಕೆ ಪಡೆದು ನಿರಂತರ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವಿಚಾರಣೆಯಲ್ಲಿ ರಾಮಲನ್​​ 2011ರಲ್ಲಿ ಶ್ರೀಲಂಕಾದಿಂದ ನಿರಾಶ್ರಿತರಾಗಿ ತಮಿಳುನಾಡಿಗೆ ಬಂದಿದ್ದರು. ತಮಿಳುನಾಡು ರಾಜಧಾನಿ ಚೆನ್ನೈನ ವಂಡಲೂರ್ ಪ್ರದೇಶದಲ್ಲಿ ಭಾರತೀಯ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಇತರ ಪ್ರಮುಖ ದಾಖಲೆಗಳನ್ನು ಪಡೆದುಕೊಳ್ಳುವಲ್ಲಿ ಅವರು ಯಶಸ್ವಿಯಾಗಿದ್ದಾರೆ.

ಇದೇ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಆಧಾರದ ಮೇಲೆ ತನಗೆ ಮತ್ತು ತನ್ನ ಕುಟುಂಬಕ್ಕೆ ವಿದೇಶ ಪ್ರವಾಸಕ್ಕಾಗಿ ಪಾಸ್‌ಪೋರ್ಟ್ ಮಾಡಿಸಿಕೊಂಡಿದ್ದಾರೆ. ಅಚ್ಚರಿ ವಿಷಯ ಎಂದರೆ, ಶ್ರೀಲಂಕಾ ಮೂಲದ ಕುಟುಂಬವು ಭಾರತೀಯ ಪಾಸ್‌ಪೋರ್ಟ್‌ಗಳನ್ನು ಪಡೆಯುವ ಮುನ್ನ ಒಟ್ಟೇರಿ ಠಾಣೆಯಿಂದ ಪೊಲೀಸ್​ ಪರಿಶೀಲನೆಯನ್ನು ಮಾಡಲಾಗಿದೆ. ಆದರೆ, ಈ ಶ್ರೀಲಂಕಾದ ಕುಟುಂಬವು ತಮಿಳುನಾಡಿನಲ್ಲಿ ಕಾನೂನು ಬಾಹಿರವಾಗಿ ವಾಸವಾಗಿದ್ದು, ಇದು ವಂಚನೆಗೆ ಸಮಾನ ಎಂದು ವಲಸೆ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ, ಈ ಕುರಿತು ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳು ದೆಹಲಿಯ ಮುಖ್ಯ ವಲಸೆ ಕಚೇರಿ ಮತ್ತು ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿದ್ದಾರೆ. ಜೊತೆಗೆ ಚೆನ್ನೈನ ಕೇಂದ್ರ ಅಪರಾಧ ವಿಭಾಗಕ್ಕೂ ಮಾಹಿತಿ ಕೊಟ್ಟಿದ್ದಾರೆ. ಹೀಗಾಗಿ ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಶ್ರೀಲಂಕಾ ಕುಟುಂಬದ ನಾಲ್ವರನ್ನು ಬಂಧಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆಗಾಗಿ ಕೇಂದ್ರ ಅಪರಾಧ ವಿಭಾಗದ ಪೊಲೀಸ್ ಕಚೇರಿಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ:Fake website: ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿದ್ದ ಮೂವರ ಬಂಧನ

ABOUT THE AUTHOR

...view details