ಕರ್ನಾಟಕ

karnataka

Teachers' Day: ರಾಷ್ಟ್ರಪತಿಯಿಂದ ಇಂದು 75 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ

By ETV Bharat Karnataka Team

Published : Sep 5, 2023, 9:50 AM IST

Teachers Day- National Teachers Award: ದೇಶದ ಶಾಲಾ-ಕಾಲೇಜು, ಸರ್ಕಾರಿ ಸಂಸ್ಥೆಗಳ 75 ಶಿಕ್ಷಕರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Teachers Day
ರಾಷ್ಟ್ರಪತಿಯಿಂದ ಇಂದು 75 ಶಿಕ್ಷಕರಿಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪ್ರದಾನ

ನವದೆಹಲಿ: ಇಂದು ರಾಷ್ಟ್ರೀಯ ಶಿಕ್ಷಕರ ದಿನದ ಸಂದರ್ಭದಲ್ಲಿ ದೇಶದ 75 ಶಿಕ್ಷಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ಶಿಕ್ಷಣ ಸಚಿವರ ಪ್ರಕಾರ, ಪ್ರಶಸ್ತಿ ಪ್ರದಾನ ಸಮಾರಂಭವು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿದೆ. ಪ್ರಶಸ್ತಿಯು ಅರ್ಹತೆ ಪ್ರಮಾಣಪತ್ರ, 50,000 ರೂ. ನಗದು ಪ್ರಶಸ್ತಿ ಹಾಗೂ ಬೆಳ್ಳಿ ಪದಕವನ್ನು ಹೊಂದಿರುತ್ತದೆ.

ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಲು ಪ್ರತಿ ವರ್ಷ ಶಿಕ್ಷಕರ ದಿನದಂದು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೇಶದ ಅತ್ಯುತ್ತಮ ಶಿಕ್ಷಕರನ್ನು, ಕಠಿಣ, ಪಾರದರ್ಶಕ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗಿದೆ. ಈ ವರ್ಷದಿಂದ, ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯ ವ್ಯಾಪ್ತಿಯನ್ನು ಉನ್ನತ ಶಿಕ್ಷಣ ಇಲಾಖೆ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯದೊಂದಿಗೆ ಸೇರಿಸಲಾಗಿದೆ. 50 ಶಾಲಾ ಶಿಕ್ಷಕರು, 13 ಉನ್ನತ ಶಿಕ್ಷಣದ ಶಿಕ್ಷಕರು ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ 12 ಶಿಕ್ಷಕರಿಗೆ ಈ ವರ್ಷ ಪ್ರಶಸ್ತಿ ನೀಡಲಾಗುವುದು. ಪ್ರತಿ ವರ್ಷ, ದೇಶವು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವಾದ ಸೆಪ್ಟೆಂಬರ್ 5ರಂದು ರಾಷ್ಟ್ರೀಯ ಶಿಕ್ಷಕರ ದಿನವಾಗಿ ಆಚರಿಸುತ್ತದೆ.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯ ಉದ್ದೇಶವು ದೇಶದಲ್ಲಿ ಶಿಕ್ಷಕರ ಅನನ್ಯ ಕೊಡುಗೆಯನ್ನು ಗುರುತಿಸಲಾಗುವುದು. ಅವರ ಬದ್ಧತೆ ಮತ್ತು ಸಮರ್ಪಣೆಯ ಮೂಲಕ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮಾತ್ರವಲ್ಲದೆ ಅವರ ವಿದ್ಯಾರ್ಥಿಗಳ ಜೀವನವನ್ನು ಶ್ರೀಮಂತಗೊಳಿಸಿದ ಶಿಕ್ಷಕರನ್ನು ಗೌರವಿಸುವುದು. ನವೀನ ಬೋಧನೆ, ಸಂಶೋಧನೆ, ಸಮುದಾಯದ ಪ್ರಭಾವ ಮತ್ತು ಕೆಲಸದ ನವೀನತೆಯನ್ನು ಗುರುತಿಸುವ ದೃಷ್ಟಿಯಿಂದ ಆನ್‌ಲೈನ್​ ಮೂಲಕ ನಾವನಿರ್ದೇಶನಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. "ಶಿಕ್ಷಕರ ಆಯ್ಕೆಗಾಗಿ ಸಚಿವಾಲಯವು ಮೂರು ಪ್ರತ್ಯೇಕ ಸ್ವತಂತ್ರ ರಾಷ್ಟ್ರೀಯ ತೀರ್ಪುಗಾರರನ್ನು ರಚಿಸಿತ್ತು. ಗಮನಾರ್ಹವಾಗಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ- 2023ರ ವಿಜೇತರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಸಂವಾದ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್​:''ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳೊಂದಿಗೆ ಗೌರವಿಸಲ್ಪಟ್ಟ ನಮ್ಮ ರಾಷ್ಟ್ರದ ಆದರ್ಶಪ್ರಾಯ ಶಿಕ್ಷಣತಜ್ಞರು. ಯುವ ಮನಸ್ಸುಗಳನ್ನು ರೂಪಿಸುವಲ್ಲಿ ಅವರ ಸಮರ್ಪಣೆ ಮತ್ತು ಶಿಕ್ಷಣದಲ್ಲಿ ಉತ್ಕೃಷ್ಟತೆಗೆ ಅವರ ಅಚಲ ಬದ್ಧತೆ ಬಹಳ ಸ್ಪೂರ್ತಿದಾಯಕವಾಗಿದೆ. ತಮ್ಮ ತರಗತಿಗಳಲ್ಲಿ, ಅವರು ಭಾರತದ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವನ್ನು ಬರೆಯುತ್ತಿದ್ದಾರೆ" ಎಂದು ಪ್ರಧಾನಿ ಮೋದಿ ಅವರು ಪ್ರಶಸ್ತಿಗೆ ಆಯ್ಕೆಯಾದವರನ್ನು ಭೇಟಿಯಾದ ನಂತರ ಸಾಮಾಜಿಕ ಜಾಲತಾಣ 'ಎಕ್ಸ್'​ನಲ್ಲಿ ಬರೆದಿದ್ದಾರೆ.

ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವ ಧರ್ಮೇಂದ್ರ ಪ್ರಧಾನ್, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ಮತ್ತು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ರಾಜೀವ್ ಚಂದ್ರಶೇಖರ್ ಮತ್ತಿತರರು ಸಂವಾದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. (ಎಎನ್‌ಐ)

ಇದನ್ನೂ ಓದಿ:ಜಿ20 ಶೃಂಗಸಭೆ: ಸೆ.8 ರಿಂದ 10 ರವರೆಗೆ ದೆಹಲಿಯಲ್ಲಿ ವ್ಯಾಪಾರ ಚಟುವಟಿಕೆಗಳಿಗೆ ನಿರ್ಬಂಧ

ABOUT THE AUTHOR

...view details