ಕರ್ನಾಟಕ

karnataka

ಆಪರೇಷನ್​ ಕಮಲದ ಭೀತಿ: ರಾಜಸ್ಥಾನಕ್ಕೆ ಶಾಸಕರನ್ನು ಶಿಫ್ಟ್​ ಮಾಡಲಿದೆಯೇ ಕಾಂಗ್ರೆಸ್?​

By

Published : Dec 8, 2022, 10:29 AM IST

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ನೇರಾನೇರ ಹಣಾಹಣಿ ನಡೆಯುತ್ತಿದೆ. ಬಿಜೆಪಿ ಇಲ್ಲಿಯೂ ಆಪರೇಷನ್​ ಕಮಲ ಮಾಡಬಹುದು ಎಂಬ ಶಂಕೆಯಲ್ಲಿ, ಕಾಂಗ್ರೆಸ್​ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಶಿಫ್ಟ್​ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ

ಶಿಮ್ಲಾ (ಹಿಮಾಚಲ ಪ್ರದೇಶ): ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ಆಪರೇಷನ್​ ಕಮಲ ಮಾಡುವ ಸಾಧ್ಯತೆ ಇರುವ ಹಿನ್ನೆಲೆ ಕಾಂಗ್ರೆಸ್​​ ತನ್ನ ಶಾಸಕರನ್ನು ರಾಜಸ್ಥಾನಕ್ಕೆ ಸ್ಥಳಾಂತರಿಸಲು ಯೋಚಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರಿಗೆ 'ಆಪರೇಷನ್ ಕಮಲ'ಕ್ಕೆ ಪೂರ್ವಭಾವಿಯಾಗಿ ಶಾಸಕರನ್ನು ಸ್ಥಳಾಂತರಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಶಾಸಕರನ್ನು ಬಸ್​​ನಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪರಿಸ್ಥಿತಿಯನ್ನು ಗಮನಿಸುತ್ತಿದ್ದು, ಇಂದು ಅವರು ಶಿಮ್ಲಾ ತಲುಪುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ.. ಈ ಬಾರಿಯೂ ಬದಲಾಗುತ್ತಾ ಅಧಿಕಾರ ಸೂತ್ರ?

ಸದ್ಯ ಕಾಂಗ್ರೆಸ್​​ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಮಾತ್ರ ಅಧಿಕಾರದಲ್ಲಿದೆ. 2023 ರಲ್ಲಿ ಇಲ್ಲಿಯೂ ಸಹ ಚುನಾವಣೆ ನಡೆಯಲಿದೆ. ಹಾಗಾಗಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಅಧಿಕಾರವನ್ನು ಹಿಡಿಯಬೇಕು ಎಂಬ ಹಂಬಲದಲ್ಲಿ ತನ್ನ ಶಾಸಕರನ್ನು ರಕ್ಷಿಸಿಕೊಳ್ಳಲು ಸ್ಥಳಾಂತರ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ABOUT THE AUTHOR

...view details