ಕರ್ನಾಟಕ

karnataka

ಇಂದಿನ ಇಡಿ ವಿಚಾರಣೆ ಮುಕ್ತಾಯ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದ್ದೇನು?

By

Published : Oct 7, 2022, 5:37 PM IST

ನನ್ನಿಂದ ಕೇಳಲಾದ ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿಕೊಂಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ತಿಳಿಸಿದರು.

the-ed-questioning-for-today-is-over-kpcc-president-dk-shivakumar
ಇಂದಿನ ಇಡಿ ವಿಚಾರಣೆ ಮುಕ್ತಾಯ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಹೇಳಿದ್ದೇನು?

ನವದೆಹಲಿ: ನ್ಯಾಷನಲ್​ ಹೆರಾಲ್ಡ್​ ಹಗರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಇಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಿದ್ದು, ಇಂದಿನ ವಿಚಾರಣೆ ಮುಕ್ತಾಯವಾಗಿದೆ.

ನ್ಯಾಷನಲ್ ಹೆರಾಲ್ಡ್ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಡಿಕೆ ಶಿವಕುಮಾರ್​​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು. ಕರ್ನಾಟಕದಲ್ಲಿ ಭಾರತ್​ ಜೋಡೋ ಯಾತ್ರೆ ನಡೆಯುತ್ತಿರುವುದರಿಂದ ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಡಿಕೆ ಶಿವಕುಮಾರ್​​ ಮನವಿ ಮಾಡಿದ್ದರು. ಆದರೆ, ಡಿಕೆಶಿ ಮನವಿಯನ್ನು ಇಡಿ ಪುರಸ್ಕರಿಸದೇ ಇಂದೇ ವಿಚಾರಣೆಗೆ ಹಾಜರಾಗಲೇಬೇಕು ಎಂದು ಹೇಳಿತ್ತು.

ಹೀಗಾಗಿಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡಿಕೆ ಶಿವಕುಮಾರ್​​ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇಂದಿನ ವಿಚಾರಣೆ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿಗೆ ವಿಚಾರಣೆ ಮುಗಿದಿದೆ. ನನ್ನಿಂದ ಕೇಳಲಾದ ದಾಖಲೆಗಳನ್ನು ಸಲ್ಲಿಸಲು ನಾನು ಒಪ್ಪಿಕೊಂಡಿದ್ದೇನೆ ಎಂದು ತಿಳಿಸಿದರು.

ಯಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ಗೆ ಹಣಕಾಸಿನ ಕೊಡುಗೆಗೆ ಸಂಬಂಧಿಸಿದ ತನಿಖೆಗೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. , ಹಣಕಾಸು ವ್ಯವಹಾರಗಳ ಬಗ್ಗೆ ಪ್ರಶ್ನಿಸಲು ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ನೋಟಿಸ್​​ ಜಾರಿ ಮಾಡಿತ್ತು.

ಇದನ್ನೂ ಓದಿ:ಇಡಿ ವಿಚಾರಣೆಗೆ ಹಾಜರಾದ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿ ಕೆ ಶಿವಕುಮಾರ್​

ABOUT THE AUTHOR

...view details