ಕರ್ನಾಟಕ

karnataka

ಆರಂಭವಾದ ಆರೇ ದಿನಗಳಲ್ಲಿ ಎಮ್ಮೆಗಳಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ಹೈಸ್ಪೀಡ್ ರೈಲು ಜಖಂ

By

Published : Oct 6, 2022, 9:38 PM IST

ಸೆಪ್ಟೆಂಬರ್​ 30ರಿಂದ ಆರಂಭವಾಗಿದ್ದ ಗಾಂಧಿನಗರ ಮತ್ತು ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಆರೇ ದಿನಗಳಲ್ಲಿ ಜಖಂಗೊಂಡಿದೆ.

vande-bharat-train-damaged-after-colliding-with-buffalo-herd-in-ahmedabad-gujarat
ಆರಂಭವಾದ ಆರೇ ದಿನಗಳಲ್ಲಿ ಎಮ್ಮೆಗಳಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ಹೈಸ್ಪೀಡ್ ರೈಲು ಜಖಂ

ಅಹಮದಾಬಾದ್ (ಗುಜರಾತ್): ಕಳೆದ ವಾರವಷ್ಟೇ ಆರಂಭವಾಗಿದ್ದ ಗಾಂಧಿನಗರ ಮತ್ತು ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರೈಲಿನ ಮುಂಭಾಗವು ಹಾನಿಯಾಗಿದೆ. ಇಂದು ಬೆಳಗ್ಗೆ ಮುಂಬೈನಿಂದ ಗಾಂಧಿನಗರಕ್ಕೆ ಹೋಗುತ್ತಿದ್ದಾಗ ಈ ಘಟನೆ ಜರುಗಿದೆ.

ಮುಂಬೈನಿಂದ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ ಹೈಸ್ಪೀಡ್ ರೈಲು ಅಹಮದಾಬಾದ್‌ನ ಬಟ್ವಾ ಮತ್ತು ಮಣಿನಗರದ ನಡುವೆ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಎಮ್ಮೆಗಳ ಹಿಂಡಿಗೆ ಗುದ್ದಿದೆ. ಇದರ ಪರಿಣಾಮ ರೈಲಿನ ಮುಂಭಾಗ ಸ್ವಲ್ಪ ಜಖಂಗೊಂಡಿದೆ.

ಆರಂಭವಾದ ಆರೇ ದಿನಗಳಲ್ಲಿ ಎಮ್ಮೆಗಳಿಗೆ ಡಿಕ್ಕಿ ಹೊಡೆದು ವಂದೇ ಭಾರತ್ ಹೈಸ್ಪೀಡ್ ರೈಲು ಜಖಂ

ಈ ಘಟನೆಯ ನಂತರ ಕಾರ್ಮಿಕರು ಇಂಜಿನ್‌ನ ಹಾನಿಯಾದ ಮುಂಭಾಗವನ್ನು ತೆಗೆದುಹಾಕುತ್ತಿರುವ ದೃಶ್ಯಗಳು ಮೊಬೈಲ್​ನಲ್ಲಿ ಸೆರೆಯಾಗಿದೆ. ಹಳಿಯಿಂದ ರೈಲಿನ ಹಾನಿಯಾದ ಭಾಗಗಳನ್ನು ತೆರವುಗೊಳಿಸಿದ ನಂತರ ರೈಲು ತನ್ನ ಪ್ರಯಾಣವನ್ನು ಮುಂದುವರೆಸಿದೆ.

ಸೆಪ್ಟೆಂಬರ್​ 30ರಂದು ಪ್ರಧಾನಿ ಮೋದಿ ಅವರು ಗಾಂಧಿನಗರ ಮತ್ತು ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಸೆಮಿ ಹೈಸ್ಪೀಡ್ ರೈಲಿಗೆ ಚಾಲನೆ ನೀಡಿದ್ದರು. ಅಲ್ಲದೇ. ಗಾಂಧಿನಗರದಿಂದ ಅಹಮದಾಬಾದ್‌ನ ಕಲುಪುರ್ ರೈಲು ನಿಲ್ದಾಣದವರೆಗೆ ಸ್ವತಃ ಪ್ರಧಾನಿ ಪ್ರಯಾಣಿಸಿದ್ದರು.

ಇದನ್ನೂ ಓದಿ:ಪ್ರಾಣಿ ಪ್ರಿಯರಿಗೆ ಗುಡ್​ ನ್ಯೂಸ್​: ಸಾಕುಪ್ರಾಣಿಗಳೊಂದಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದ ಆಕಾಶ್​ ಏರ್​​

ABOUT THE AUTHOR

...view details