ಕರ್ನಾಟಕ

karnataka

'ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ, 150 ಸೀಟು ಗೆದ್ದು ಮತ್ತೆ ಅಧಿಕಾರಕ್ಕೆ ಬರ್ತೇವೆ'

By

Published : Aug 12, 2022, 6:05 PM IST

ಕಾಂಗ್ರೆಸ್​ ನಾಯಕತ್ವ ಇಲ್ಲದ ಪಕ್ಷ. ಬಿಜೆಪಿ ವಿರುದ್ಧ ಯಾವುದೇ ಅಜೆಂಡಾ ಕೂಡ ಕಾಂಗ್ರೆಸ್​ನವರಿಗಿಲ್ಲ. ಹೀಗಾಗಿಯೇ ಸಿಎಂ ಬದಲಾವಣೆಯಂತಹ ವಿಷಯಗಳನ್ನು ಅವರು ಹುಟ್ಟು ಹಾಕುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್​ ಟೀಕಿಸಿದರು.

Will contest Assembly polls under Bommai's leadership: Arun Singh
'ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆ ಎದುರಿಸುತ್ತೇವೆ, 150ರ ಗುರಿ ಪೂರೈಸಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ'

ನವದೆಹಲಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಚರ್ಚೆಗಳ ನಡುವೆಯೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್​ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆಯನ್ನು ಪಕ್ಷ ಎದುರಿಸಲಿದೆ ಎಂದು ಅರುಣ್​ ಸಿಂಗ್​ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲೂ ನಾವೇ ಅಧಿಕಾರಕ್ಕೆ ಬರುತ್ತೇವೆ. ನಾಯತ್ವದ ಬದಲಾವಣೆಯ ವಿಷಯವನ್ನು ಡಿ.ಕೆ.ಶಿವಕುಮಾರ್​ ಮತ್ತು ಸಿದ್ದರಾಮಯ್ಯ ಮುನ್ನೆಲೆಗೆ ತಂದಿದ್ದಾರೆ. ಅವರಿಗೆ ಚುನಾವಣೆ ಎದುರಿಸಲು ಯಾವುದೇ ವಿಷಯಗಳಿಲ್ಲ. ಕಾಂಗ್ರೆಸ್​ ನಾಯಕತ್ವ ಇಲ್ಲದ ಪಕ್ಷ. ಬಿಜೆಪಿ ವಿರುದ್ಧ ಯಾವುದೇ ಅಜೆಂಡಾ ಕೂಡ ಕಾಂಗ್ರೆಸ್​ನವರಿಗಿಲ್ಲ. ಹೀಗಾಗಿಯೇ ಸಿಎಂ ಬದಲಾವಣೆ ಎಂಬ ವಿಷಯಗಳನ್ನು ಹುಟ್ಟು ಹಾಕುತ್ತಿದ್ದಾರೆ ಎಂದರು.

ನಾಯತ್ವದ ಬದಲಾವಣೆ ಕುರಿತು ಪಕ್ಷದ ಶಾಸಕರೇ ಮಾತನಾಡುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಅರುಣ್​ ಸಿಂಗ್​, ನಾನು ಈಗಾಗಲೇ ಹೇಳಿದ್ದೇನೆ. ಬೊಮ್ಮಾಯಿ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ. ಎಸ್ಸಿ, ಎಸ್ಟಿ ಸಮುದಾಯ, ರೈತರು ಮತ್ತು ಯುವಕರಿಗಾಗಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ನಾವು ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ. 150 ಸ್ಥಾನ ಗೆಲ್ಲಬೇಕೆಂಬ ಗುರಿ ಹೊಂದಿದ್ದೇವೆ. ಅದನ್ನು ನಾವು ಪೂರೈಸಿಯೇ ತೀರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಲ್ಲದೇ, ಕಾಂಗ್ರೆಸ್​ ಒಡೆದ ಮನೆಯಾಗಿದೆ. ಅವರಿಗೆ ಯಾವುದೇ ನೆಲೆ ಇಲ್ಲ. ಹೀಗಾಗಿ ಗೊಂದಲಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ 'ಟೇಪ್​' ಮತ್ತು ಪಿತೂರಿಗಳನ್ನೇ ನೆಚ್ಚಿಕೊಂಡಿದೆ ಎಂದು ಟೀಕಿಸಿದರು.

ಇದನ್ನೂ ಓದಿ:ಸಿಎಂ ಸ್ಥಾನಕ್ಕೆ ಶೆಟ್ಟರ್ ಹೆಸರು ಮುನ್ನೆಲೆಗೆ ತಂದವರಾರು ಗೊತ್ತಿಲ್ಲ: ಪ್ರಹ್ಲಾದ್ ಜೋಶಿ

ABOUT THE AUTHOR

...view details