ಕರ್ನಾಟಕ

karnataka

ಶ್ರದ್ಧಾ ರೀತಿಯ ಮತ್ತೊಂದು ಕೇಸ್​ ಬಯಲು.. ಪತಿಯ ದೇಹವನ್ನು 22 ತುಂಡುಗಳಾಗಿ ಕತ್ತರಿಸಿದ ಪತ್ನಿ: ಇಬ್ಬರ ಬಂಧನ

By

Published : Nov 28, 2022, 1:24 PM IST

ಪತ್ನಿ ತನ್ನ ಪುತ್ರನೊಂದಿಗೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿ, ಬಳಿಕ ದೇಹವನ್ನು 22 ತುಂಡುಗಳಾಗಿ ಕತ್ತರಿಸಿರುವ ಘಟನೆ ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ನಡೆದಿದೆ. ಈ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೇಹವನ್ನು 22 ತುಂಡುಗಳಾಗಿ ಕತ್ತರಿಸಿದ ಪತ್ನಿ
ದೇಹವನ್ನು 22 ತುಂಡುಗಳಾಗಿ ಕತ್ತರಿಸಿದ ಪತ್ನಿ

ನವದೆಹಲಿ: ಪೂರ್ವ ದೆಹಲಿಯ ಪಾಂಡವ್ ನಗರದಲ್ಲಿ ಶ್ರದ್ಧಾ ವಾಲ್ಕರ್​ ಹತ್ಯೆ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ಪುತ್ರನೊಂದಿಗೆ ಸೇರಿಕೊಂಡು ಪತಿಯನ್ನು ಕೊಂದು, ದೇಹವನ್ನು 22 ತುಂಡುಗಳಾಗಿ ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪದ ಮೇಲೆ ಸೋಮವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ದೇಹವನ್ನು 22 ತುಂಡುಗಳಾಗಿ ಕತ್ತರಿಸಿದ ಪತ್ನಿ

ಪೂನಂ ಮತ್ತು ದೀಪಕ್, ಅಂಜನ್ ದಾಸ್ ಅವರ ದೇಹದ ಭಾಗಗಳನ್ನು ಮೊದಲು ಫ್ರಿಡ್ಜ್‌ನಲ್ಲಿ ಇಟ್ಟಿದ್ದಾರೆ. ಬಳಿಕ ಪೂರ್ವ ದೆಹಲಿಯ ವಿವಿಧ ಸ್ಥಳಗಳಲ್ಲಿ ಅವುಗಳನ್ನು ವಿಲೇವಾರಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ದಾಸ್‌ಗೆ ಅಕ್ರಮ ಸಂಬಂಧವಿತ್ತು. ಇದೇ ವಿಚಾರವಾಗಿ ಕೊಲೆ ನಡೆದಿದೆ ಎಂದು ಪೂನಂ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ವರದಿಯಾಗಿದೆ.

ಕೆಲ ದಿನಗಳ ಹಿಂದೆ ಲಿವ್​ ಇನ್​ ರಿಲೆಷನ್​ಶಿಪ್​ನಲ್ಲಿದ್ದ ಅಫ್ತಾಬ್​​ ತನ್ನ ಹುಡುಗಿಯನ್ನು ಕತ್ತು ಹಿಸುಕಿ ಕೊಂದು, ಬಳಿಕ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ್ದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಈ ಘಟನೆ ಆದ ಕೆಲವೇ ದಿನಗಳಲ್ಲಿ ಮತ್ತೆ ಇಂತದೊಂದು ಪ್ರಕರಣ ದೆಹಲಿಯಲ್ಲಿ ನಡೆದಿದೆ.

ಇದನ್ನೂ ಓದಿ:ಶ್ರದ್ಧಾ ಕೊಲೆ ಪ್ರಕರಣ: ಅಫ್ತಾಬ್​​ಗೆ ಇಂದು ಮತ್ತೆ ಪಾಲಿಗ್ರಾಫ್​ ಪರೀಕ್ಷೆ

ABOUT THE AUTHOR

...view details