ಕರ್ನಾಟಕ

karnataka

ಟಾಟಾ ಮೋಟಾರ್ಸ್​ ಕಾರುಗಳ ಬೆಲೆ ಹೆಚ್ಚಳ

By

Published : Apr 23, 2022, 9:37 PM IST

ಉತ್ಪಾದನಾ ವೆಚ್ಚ ಹೆಚ್ಚಳದ ಪರಿಣಾಮವಾಗಿ ಜನವರಿಯಲ್ಲಿ ಬೆಲೆ ಹೆಚ್ಚಳ ಮಾಡಿದ್ದ ಟಾಟಾ ಮೋಟಾರ್ಸ್​ ಕಂಪನಿಯು ಇದೀಗ ಮತ್ತೊಮ್ಮೆ ತನ್ನ ಕಾರುಗಳ ಬೆಲೆ ಹೆಚ್ಚಿಸಿದೆ.

tata-motors
ಟಾಟಾ ಮೋಟಾರ್ಸ್​

ದೇಶದ ಅತಿದೊಡ್ಡ ಕಾರು ತಯಾರಿಕಾ ಕಂಪನಿಯಾದ ಟಾಟಾ ಮೋಟಾರ್ಸ್​ ಕಂಪನಿ ತನ್ನ ಮಾರುತಿ ಸುಜುಕಿ ಕಾರುಗಳ ಬೆಲೆ ಹೆಚ್ಚಳ ಮಾಡಿದೆ. ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದೆ. ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಮಾರುತಿ ಸುಜುಕಿ ಕಂಪನಿಯು ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಶೇ. 1ರಿಂದ ಶೇ. 1.30ರಷ್ಟು ಬೆಲೆ ಹೆಚ್ಚಳ ಮಾಡಲಾಗಿದೆ.

ಕೋವಿಡ್‌ ಪರಿಣಾಮವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯೇ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ. ಇದರಂತೆ ಮಾರುತಿ ಸುಜುಕಿ ಕೂಡ ಬೆಲೆ ಏರಿಕೆ ಮಾಡಿದೆ. ಉತ್ಪಾದನಾ ವೆಚ್ಚ ಹೆಚ್ಚಳದ ಪರಿಣಾಮವಾಗಿ ವರ್ಷದ ಆರಂಭದಲ್ಲಿ (ಜನವರಿ) ಬೆಲೆ ಹೆಚ್ಚಳ ಮಾಡಿದ್ದ ಕಂಪನಿಯು ಇದೀಗ ಮತ್ತೊಮ್ಮೆ ಬೆಲೆ ಹೆಚ್ಚಿಸಿದೆ.

ಹೊಸ XL6 1.5-ಲೀಟರ್ ಪೆಟ್ರೋಲ್ ಎಂಜಿನ್‌ನಿಂದ 75.8 kW ಗರಿಷ್ಠ ಶಕ್ತಿಯನ್ನು ಹೊಂದಿದೆ. ಇದು ಮ್ಯಾನುಯಲ್ ಮತ್ತು ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಆಯ್ಕೆಗಳಲ್ಲಿ ಲಭ್ಯವಿದ್ದು, ಇದರ ಬೆಲೆ 11.29 ಲಕ್ಷ ಮತ್ತು 14.55 ಲಕ್ಷಕ್ಕೆ (ಎಕ್ಸ್ ಶೋ ರೂಂ) ಹೆಚ್ಚಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ ನೋಡಿ..

ABOUT THE AUTHOR

...view details