ಕರ್ನಾಟಕ

karnataka

'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ': ಫೆ.20ರಂದು ಗ್ರಾಮ ವಾಸ್ತವ್ಯ ಹೂಡಲಿರುವ ಬೆಳಗಾವಿ ಡಿಸಿ

By

Published : Feb 18, 2021, 8:26 AM IST

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಎಂಬ ಘೋಷದಡಿ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ. 20ರಂದು ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆಸಲಿದ್ದಾರೆ.

Belgaum District Collector MG Hiremath
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ:ರಾಜ್ಯ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿ ಮತ್ತು ವಿವಿಧ ತಾಲೂಕುಗಳ ತಹಶೀಲ್ದಾರ್​ಗಳು ಬೆಳಗಾವಿ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಅಹವಾಲು ಸ್ವೀಕರಿಸಿ, ಅಂದು ರಾತ್ರಿ ಗ್ರಾಮದಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು "ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಎಂಬ ಘೋಷದಡಿ ಮೊದಲ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಫೆ. 20ರಂದು ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದಲ್ಲಿ ನಡೆಸಲಿದ್ದಾರೆ. ಅಂದು ಬೆಳಿಗ್ಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಗ್ರಾಮದ ಜನರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ನಂತರ ಅಂದು ರಾತ್ರಿ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಅದೇ ದಿನ ಆಯಾ ಉಪ ವಿಭಾಗಾಧಿಕಾರಿಗಳು ಹಾಗೂ ತಾಲೂಕುಗಳ ತಹಶೀಲ್ದಾರ್​ಗಳು ಕೂಡ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಕಿತ್ತೂರು ತಹಶೀಲ್ದಾರ್​ (ಬಸರಖೋಡ)

ಬೆಳಗಾವಿ ತಹಶೀಲ್ದಾರ್​ (ಧಾಮಣೆ ಎಸ್ ಬೈಲೂರ)

ಖಾನಾಪುರ ತಹಶೀಲ್ದಾರ್​ (ಪೋಟೋಳಿ)

ಹುಕ್ಕೇರಿ ತಹಶೀಲ್ದಾರ್​ (ಹುಲ್ಲೋಳಿ)

ರಾಮದುರ್ಗ ತಹಶೀಲ್ದಾರ್​ (ಚಿಂಚನೂರ)

ಸವದತ್ತಿ ತಹಶೀಲ್ದಾರ್​ (ಜಾಲಿಕಟ್ಟಿ)

ಗೋಕಾಕ್​ ತಹಶೀಲ್ದಾರ್ ​(ಏಳಪಟ್ಟಿ)

ಮೂಡಲಗಿ ತಹಶೀಲ್ದಾರ್​ (ಹನಮಾಪುರ)

ಚಿಕ್ಕೋಡಿ ತಹಶೀಲ್ದಾರ್​ (ಹತ್ತರವಾಟ)

ನಿಪ್ಪಾಣಿ ತಹಶೀಲ್ದಾರ್​ (ಶೆಂಡೂರ)

ರಾಯಬಾಗ ತಹಶೀಲ್ದಾರ್​ (ಬೂದಿಹಾಳ)

ಅಥಣಿ ತಹಶೀಲ್ದಾರ್​(ಐಗಳಿ)

ಕಾಗವಾಡ ತಹಶೀಲ್ದಾರ್​ (ಲೋಕೂರ) ‌ಗ್ರಾಮಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮವಾಸ್ತವ್ಯದಲ್ಲಿನ ಕಾರ್ಯಗಳು:
ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್​ಗಳು ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು ಹಾಗೂ ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಗ್ರಾಮಸ್ಥರ ಜತೆ ಚರ್ಚಿಸಿ ಸ್ಥಳದಲ್ಲಿಯೇ ಸಮಸ್ಯೆ ಪರಿಹರಿಸಲು ಸರಕಾರದ ನಿರ್ದೇಶನಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು.

ಓದಿ: ದಲಿತ ಯುವತಿ ಮೇಲೆ ಅತ್ಯಾಚಾರ, ಹತ್ಯೆ: ಆರ್. ಬಿ. ತಿಮ್ಮಾಪೂರ ಖಂಡನೆ

ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ, ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸಲಾಗುವುದು. ಸರ್ಕಾರದ ಈ ಮಾರ್ಗಸೂಚಿಗಳ ಪ್ರಕಾರ ಆಯಾ ಗ್ರಾಮಗಳ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ABOUT THE AUTHOR

...view details