ಕರ್ನಾಟಕ

karnataka

ರಾಜ್ಯದ ನೆಮ್ಮದಿ ಕೆಡಿಸಲು ಬಿಜೆಪಿಗರು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡ್ತಿದ್ದಾರೆ: ಡಿಕೆಶಿ

By

Published : Dec 16, 2021, 12:46 PM IST

ಬಿಜೆಪಿ ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ರಾಜ್ಯ ಬಿಜೆಪಿ ನಾಯಕರು ಪ್ರತಿ ಹಂತದಲ್ಲಿ ಲಂಚ ಪಡೆಯುತ್ತಿದ್ದು, ರಾಜ್ಯದ ನೆಮ್ಮದಿ ಕೆಡಿಸಲು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

DK Shivakumar
ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್

ಬೆಳಗಾವಿ: ರಾಜ್ಯದ ನೆಮ್ಮದಿ ಕೆಡಿಸಲು ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತಿದ್ದಾರೆ. ಬಿಜೆಪಿ ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷರು ಕೂಡ ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿದರು. ಬಿಜೆಪಿ ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ರಾಜ್ಯ ಬಿಜೆಪಿ ನಾಯಕರು ಪ್ರತಿ ಹಂತದಲ್ಲಿ ಲಂಚ ಪಡೆಯುತ್ತಿದ್ದಾರೆ. ಆದ್ರೆ, ಪ್ರಧಾನಿ ಮೋದಿ ನಮ್ಮ ಸರ್ಕಾರದ ವಿರುದ್ಧ 10 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡಿದ್ರು. ಈಗ ಅವರದ್ದು 40% ಕಮಿಷನ್ ಸರ್ಕಾರವಾಗಿದೆ. ಹೀಗಾಗಿ, ಈ ಕುರಿತು ಸಂಪೂರ್ಣ ತನಿಖೆ ಆಗಲಿ ಎಂದು ಡಿಕೆಶಿ ಆಗ್ರಹಿಸಿದರು.

ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್

ರಾಜ್ಯದ ರೈತರಿಗೆ ಇನ್ನೂ ಮಳೆ, ನೆರೆ ಹಾನಿಯ ಪರಿಹಾರದ ಹಣ ಕೊಟ್ಟಿಲ್ಲ. ರಾಜ್ಯ ಸರ್ಕಾರ ಯಾವುದೇ ರಂಗದಲ್ಲೂ ಸಂತ್ರಸ್ತರಿಗೆ ಸಹಾಯ ಮಾಡಿಲ್ಲ. ಇದು ಬಿಜೆಪಿ ಸರ್ಕಾರವಲ್ಲ, ಸಂಯುಕ್ತ ಸರ್ಕಾರ, 40 % ಸರ್ಕಾರ. ಇಡೀ ರಾಜ್ಯಕ್ಕೆ ಬಿಜೆಪಿ ಸರ್ಕಾರ ಕಳಂಕ ಎಂದು ಡಿಕೆಶಿ ಹರಿಹಾಯ್ದರು.

ರಾಜ್ಯದ ನೆಮ್ಮದಿ ಹಾಳು ಮಾಡಲು ಮತಾಂತರ ಕಾಯ್ದೆ ಜಾರಿ ಮಾಡುತ್ತಿದ್ದಾರೆ:

ಬಿಜೆಪಿ ಭ್ರಷ್ಟ ಸರ್ಕಾರಕ್ಕೆ ಹೇಳುವವರು- ಕೇಳುವವರು ಯಾರೂ ಇಲ್ಲ. ಹೀಗಾಗಿ ನಾಡಿನ ಜನ ಸರ್ಕಾರದ ವಿರುದ್ಧ ಬೇಸತ್ತು, ಬದಲಾವಣೆ ಬಯಸಿದ್ದಾರೆ ಎಂದರು.

ABOUT THE AUTHOR

...view details