ಕರ್ನಾಟಕ

karnataka

ಯಡಿಯೂರಪ್ಪ ಬದಲಾಗಲ್ಲ, ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ : ಸಚಿವ ಜಾರಕಿಹೊಳಿ‌

By

Published : Nov 6, 2020, 4:25 PM IST

ಬಸವಕಲ್ಯಾಣ ಕ್ಷೇತ್ರದಿಂದ ಸಿಎಂ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂಬ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ..

there-is-no-cm-change-in-the-state-ramesh-jarkiholi-said
ಸಚಿವ ಜಾರಕಿಹೊಳಿ‌

ಬೆಳಗಾವಿ: ಬಿ.ಎಸ್. ಯಡಿಯೂರಪ್ಪನವರೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲ್ಲಿದ್ದಾರೆ. ಸಿಎಂ ಬದಲಾವಣೆ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು ಭ್ರಮೆಯಲ್ಲಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.

ನಗರದ ಪ್ರವಾಸಿಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ. ಎಸ್. ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಿಸಲ್ಲ ಎಂದು ನಮ್ಮ ವರಿಷ್ಠರು ಹೇಳಿದ್ದಾರೆ. ಈ ಕುರಿತು ಬಿಜೆಪಿ ಕಾರ್ಯಕಾರಣಿ ಸಭೆಯಲ್ಲೂ ತೀರ್ಮಾನ ಆಗಿದೆ ಎಂದು ಸ್ಪಷ್ಟಪಡಿಸಿದರು.

ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನ ಗೆಲ್ಲುವ ವಿಶ್ವಾಸವಿದೆ. ಶಾಸಕಿ ಅಂಜಲಿ ನಿಂಬಾಳ್ಕರ್ ಡಿಸಿ ಭೇಟಿಗೆ ಪ್ರವಾಸಿಮಂದಿರಕ್ಕೆ ಬಂದಿದ್ದರು‌. ಈ ಸಂದರ್ಭದಲ್ಲಿ ಅವರ ಜತೆಗೂಡಿ ಟೀ ಕುಡಿದಿದ್ದೇವೆ, ರಾಜಕೀಯ ಚರ್ಚೆಯಾಗಿಲ್ಲ ಎಂದರು.

ಸಿಎಂ ಬದಲಾವಣೆ ಕುರಿತು ಸಚಿವ ರಮೇಶ್​ ಜಾರಕಿಹೊಳಿ ಹೇಳಿಕೆ

ಧಾರವಾಡ‌ ಜಿ.ಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಪ್ರಕರಣ ಕೋರ್ಟ್​ನಲ್ಲಿ ವಿಚಾರಣೆ ನಡೆದಿದೆ. ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂದ್ರೆ ಗೆದ್ದು ಬರ್ತಾರೆ.

ಕಾಂಗ್ರೆಸ್ ಪಕ್ಷದವರು ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವುದು ತಪ್ಪೇನಿಲ್ಲ, ಮಾಡಲಿ. ಸಿಬಿಐ ಸ್ವತಂತ್ರ ಸಂಸ್ಥೆ ವಿಚಾರಣೆ ಮಾಡುತ್ತಿದ್ದಾರೆ. ವಿನಯ್ ಕುಲಕರ್ಣಿ ತಪ್ಪು ಮಾಡದಿದ್ರೇ ಯಾಕೆ ಹೆದರಬೇಕು ಎಂದರು.

ಎಂಇಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಬಿಜೆಪಿಗೆ ಸೇರ್ಪಡೆ ವಿಚಾರವನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಈ ಬಗ್ಗೆ ನಮ್ಮ ವರಿಷ್ಠರು ನಿರ್ಣಯ ತೆಗೆದುಕೊಳ್ಳುತ್ತಾರೆ.

ಬಸವಕಲ್ಯಾಣ ಕ್ಷೇತ್ರದಿಂದ ಸಿಎಂ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂಬ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.

TAGGED:

ABOUT THE AUTHOR

...view details