ಕರ್ನಾಟಕ

karnataka

ಸಾರಿಗೆ ನೌಕರರಿಗೆ 6ನೇ ವೇತನದ ಭರವಸೆ ನೀಡಲ್ಲ : ಗೃಹ ಸಚಿವ ಬೊಮ್ಮಾಯಿ ಸ್ಪಷ್ಟೀಕರಣ

By

Published : Apr 19, 2021, 8:40 PM IST

ಇದು ಮುಷ್ಕರ ನಡೆಸಲು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮಾತ್ರ ನಾನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದೇನೆ..

6th-pay-commission-is-not-guaranteed-for-transport-employees
ಬೊಮ್ಮಾಯಿ

ಬೆಂಗಳೂರು :ಜನಸಾಮಾನ್ಯರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮಾತ್ರ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹೇಳಿದ್ದೇನೆ.

ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮಾಡಿಲ್ಲ. 6ನೇ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ.

ಇಂದು ಬೆಳಗ್ಗೆ ಕೋಡಿಹಳ್ಳಿ ಚಂದ್ರಶೇಖರ್ ಭೇಟಿ ಮಾಡಿದ್ದರು. ಸಾರಿಗೆ ನೌಕರರ ಹೋರಾಟದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ತಿಳಿಸುತ್ತೇನೆ ಎಂದು ಮಾತ್ರ ಹೇಳಿದ್ದೇನೆ. ಹೀಗಾಗಿ, ಸಾರಿಗೆ ನೌಕರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಈ ಸ್ಪಷ್ಟೀಕರಣ ನೀಡುತ್ತೇನೆ ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಇದು ಮುಷ್ಕರ ನಡೆಸಲು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮಾತ್ರ ನಾನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದೇನೆ.

ಆದರೆ, ಕೋಡಿಹಳ್ಳಿ ಚಂದ್ರಶೇಖರ್ ಅವರ ಕರಪತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಇದರಿಂದ ಸಾರಿಗೆ ನೌಕರರಿಗೆ ತಪ್ಪು ಸಂದೇಶ ರವಾನೆಯಾಗಬಾರದು. ಹೀಗಾಗಿ, ಈ ಸ್ಪಷ್ಟೀಕರಣವನ್ನು ಕೊಡಲು ಬಯಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details