ಕರ್ನಾಟಕ

karnataka

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಕ್ರಮ : ಸಚಿವ ಕಾರಜೋಳ

By

Published : Jan 29, 2022, 5:18 PM IST

ರಾಜ್ಯ ಸರ್ಕಾರದ ಸರ್ಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಸೇರಿ ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು..

minister govinda karajola
ಸಚಿವ ಗೋವಿಂದ ಕಾರಜೋಳ

ಬೆಂಗಳೂರು :ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ, ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು.

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಬಿ.ಶ್ರೀರಾಮುಲು ಅವರು ಸದಸ್ಯರಾಗಿದ್ದಾರೆ. ಇಲಾಖಾವಾರು, ನಿಗಮವಾರು, ವಿಶ್ವವಿದ್ಯಾಲಯವಾರು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗಾಗಿ ಕೈಗೊಂಡಿರುವ ಕ್ರಮಗಳನ್ನು ಸಮಿತಿಯು ವಿವರವಾಗಿ ಪರಿಶೀಲಿಸಿತು.

ರಾಜ್ಯ ಸರ್ಕಾರದ ಸರ್ಕಾರಿ ಕಾಲೇಜುಗಳಲ್ಲಿ, ಅನುದಾನಿತ ಕಾಲೇಜುಗಳಲ್ಲಿ, ಅನುದಾನಿತ ತಾಂತ್ರಿಕ ಕಾಲೇಜುಗಳಲ್ಲಿ ಮತ್ತು ವಿವಿಧ ವಿಶ್ವ ವಿದ್ಯಾಲಯಗಳಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ 446 ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 436 ಸೇರಿ ಒಟ್ಟು 882 ಹುದ್ದೆಗಳ ನೇಮಕಾತಿ ಬಾಕಿ ಇದೆ ಎಂಬುದನ್ನು ಸಮಿತಿ ಗಂಭೀರವಾಗಿ ಪರಿಗಣಿಸಿತು.

ಈ ಎಲ್ಲಾ ಹುದ್ದೆಗಳ ನೇಮಕಾತಿಗೆ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿತು. ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ ಮಾಡಿ : ಸಿಎಂ ಬೊಮ್ಮಾಯಿ

ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೈಗೊಳ್ಳಬೇಕಾದ ನೇಮಕಾತಿಗಳನ್ನು ಒಂದು ವಾರದಲ್ಲಿ ಅಧಿಸೂಚಿಸಿ ಮುಂದಿನ ಆರು ತಿಂಗಳಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಿ ಆಯ್ಕೆ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕೆಂದು ಲೋಕಸೇವಾ ಆಯೋಗವನ್ನು ಕೋರಲು ಕ್ರಮಕೈಗೊಳ್ಳಬೇಕೆಂದು ಎಲ್ಲಾ ಇಲಾಖಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರಿಗೆ ಉಪ ಸಮಿತಿ ಅಧ್ಯಕ್ಷರೂ ಆಗಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details