ಕರ್ನಾಟಕ

karnataka

ಪರಿಶಿಷ್ಟ ಪಂಗಡಕ್ಕಾಗಿ ಉತ್ತಮ ಯೋಜನೆಗಳನ್ನು ಸರ್ಕಾರ ಜಾರಿಗೆ ತರುತ್ತಿದೆ: ಶ್ರೀರಾಮುಲು

By

Published : Jan 6, 2022, 5:04 PM IST

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯುತ್ತಮ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

minister shriramulu on Scheduled Tribe
ಪರಿಶಿಷ್ಟ ಪಂಗಡ ಕುರಿತು ಶ್ರೀರಾಮುಲು ಮಾತನಾಡಿರುವುದು

ಬೆಂಗಳೂರು: ಕೇಂದ್ರ ಹಾಗು ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡದ ಸಮುದಾಯಕ್ಕಾಗಿ ಉತ್ತಮ ಯೋಜನೆಗಳನ್ನು ಜಾರಿಗೆ ತರುತ್ತಿದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬಿಜೆಪಿ ಎಸ್‍ಟಿ ಮೋರ್ಚಾ ವತಿಯಿಂದ ದಕ್ಷಿಣ ಭಾರತ ರಾಜ್ಯಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನೆ ಕುರಿತ ಸಭೆ ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆಯಿತು.


ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶ್ರೀರಾಮುಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯುತ್ತಮ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಅವುಗಳು ಸರಿಯಾದ ಫಲಾನುಭವಿಯನ್ನು ಸಕಾಲದಲ್ಲಿ ತಲುಪುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಇದನ್ನೂ ಓದಿ:ರಾಜ್ಯದಲ್ಲಿ ಇಂದಿನಿಂದ ಕೋವಿಡ್​ ಹೊಸ ಮಾರ್ಗಸೂಚಿ ಜಾರಿ: ಯಾವುದಕ್ಕೆಲ್ಲಾ ನಿರ್ಬಂಧ?

ನೀತಿ ಮತ್ತು ಸಂಶೋಧನಾ ಘಟಕದ ರಾಷ್ಟ್ರೀಯ ಉಸ್ತುವಾರಿ ಡಾ.ಸುಮೇರ್ ಸಿಂಗ್ ಸೋಲಂಕಿ, ಸಹ ಉಸ್ತುವಾರಿ ಶ್ರೀಮತಿ ಅಜೀಂ ಬೊಬ್ಬಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಎಸ್‍ಟಿ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷರಾದ ಗಂಗಾಧರ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ತಿಪ್ಪರಾಜು ಹವಾಲ್ದಾರ್ ಹಾಗೂ ಪ್ರಮುಖ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

TAGGED:

ABOUT THE AUTHOR

...view details