ಕರ್ನಾಟಕ

karnataka

ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಡಿ.ಕೆ.ಶಿವಕುಮಾರ್ ವಿರುದ್ಧ ಸೈಬರ್ ಠಾಣೆಗೆ ದೂರು

By

Published : Oct 20, 2021, 12:28 AM IST

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ ಕಟೀಲ್ ಬಗ್ಗೆ ಕೆಟ್ಟ ಪದಗಳಿಂದ ನಿಂದಿಸಿ, ಅವರ ವ್ಯಕ್ತಿತ್ವದ ಬಗ್ಗೆಯೂ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ಬಿಜೆಪಿ ಮುಖಂಡರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

case filed against kpcc president and congress it chief
ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್: ಡಿ.ಕೆ.ಶಿವಕುಮಾರ್ ವಿರುದ್ಧ ಸೈಬರ್ ಠಾಣೆಗೆ ದೂರು

ಬೆಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಗ್ಗೆ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಐಟಿ ವಿಭಾಗದ ಮುಖ್ಯಸ್ಥನ ವಿರುದ್ಧ ದೂರು ದಾಖಲಾಗಿದೆ.

ಕರ್ನಾಟಕ ಕಾಂಗ್ರೆಸ್ ಟ್ವಿಟರ್ ಖಾತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​​ ಕಟೀಲ್ ಬಗ್ಗೆ ಕೆಟ್ಟ ಪದಗಳಿಂದ ನಿಂದಿಸಿ, ಅವರ ವ್ಯಕ್ತಿತ್ವದ ಬಗ್ಗೆಯೂ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿದೆ ಎಂದು ಬಿಜೆಪಿ ಮುಖಂಡರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಐಟಿ ವಿಭಾಗದ ಮುಖ್ಯಸ್ಥನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಹೆಚ್​.ಯೋಗೇಂದ್ರ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಎನ್ನುವುದನ್ನೇ ಮರೆಯುತ್ತಿದ್ದಾರೆ: ಬಿಎಸ್​ವೈ ಟೀಕೆ

ABOUT THE AUTHOR

...view details