ಕರ್ನಾಟಕ

karnataka

ಸಂಪುಟ ವಿಸ್ತರಣೆ.. ಹೈಕಮಾಂಡ್ ಸೂಚಿಸುತ್ತಿದ್ದಂತೆ ದೆಹಲಿ ಭೇಟಿ: ಸಿಎಂ ಬೊಮ್ಮಾಯಿ

By

Published : Apr 18, 2022, 11:10 AM IST

Updated : Apr 18, 2022, 12:26 PM IST

ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಎನ್ನುವ ಎಲ್ಲ ವಿಚಾರ ದೆಹಲಿಯಲ್ಲಿಯೇ ತೀರ್ಮಾನವಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

CM Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಸೂಚನೆ ನೀಡುತ್ತಿದ್ದಂತೆ ದೆಹಲಿಗೆ ತೆರಳಿ ಚರ್ಚಿಸಿದ ಬಳಿಕವಷ್ಟೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದು ದೆಹಲಿಯಲ್ಲೇ ನಿರ್ಧಾರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ವಿಚಾರ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜತೆ ಮಾತುಕತೆ ನಡೆಸಲಾಗಿದೆ. ದೆಹಲಿಗೆ ಹೋದ ನಂತರ ಸಭೆ ಮಾಡಿ ತಿಳಿಸುತ್ತೇವೆ. ಅಮೇಲೆ ನೀವು ಬನ್ನಿ ಎಂದು ಅವರು ಹೇಳಿದ್ದಾರೆ ಎಂದರು.

ಸಿಐಡಿ ವರದಿ ನಂತರ ಮರು ಪರೀಕ್ಷೆ ನಿರ್ಧಾರ:ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಮತ್ತೆ ಪರೀಕ್ಷೆ ಮಾಡಿ ಎಂಬ ಒತ್ತಾಯ ಕೇಳಿ ಬಂದಿದೆ. ಆದರೆ ಸಿಐಡಿ ವರದಿ ಬಳಿಕವೇ ಮುಂದಿನ ಕ್ರಮ ಕೈಗೊಳ್ಳುತ್ತೇವೆ‌‌ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದ ವಿಚಾರ ಕುರಿತು ಹಲವಾರು ದೂರುಗಳು ಬಂದವು. ಹಾಗಾಗಿ ತಕ್ಷಣವೇ ಗೃಹ ಸಚಿವರು ನೇಮಕಾತಿ ಪ್ರಕ್ರಿಯೆ ಪ್ರಕರಣ ಅಕ್ರಮ ಆರೋಪ ಕುರಿತು ತನಿಖೆ ನಡೆಸಲು ಸಿಐಡಿಗೆ ಕೊಟ್ಟಿದ್ದಾರೆ. ನಾವೇ ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂದು ಸಿಐಡಿಗೆ ಕೊಟ್ಟಿದ್ದೇವೆ. ಇದರಲ್ಲಿ ಯಾರೇ ಇರಲಿ, ಯಾವ ಯಾವ ಸೆಂಟರ್ ನಲ್ಲಿ ಪರೀಕ್ಷೆಯಾಗಿ, ಪರೀಕ್ಷೆ ನಂತರ ಸೂಪರ್ ವೈಸರ್ ಲೆವೆಲ್​​ನಲ್ಲಿ ಸಮಸ್ಯೆಯಾಗಿದ್ದರೆ ಎಲ್ಲವನ್ನೂ ಪರಿಶೀಲಿಸಲಿ. ಸಮಗ್ರವಾಗಿ ತನಿಖೆ ಮಾಡಲು ಆದೇಶ ಕೊಟ್ಟಿದ್ದೇನೆ. ಬೇರೆ ಸರ್ಕಾರದ ಇದ್ದಿದ್ದರೆ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿತ್ತು. ಆದರೆ ನಮ್ಮ ಗಮನಕ್ಕೆ ಬಂದ ತಕ್ಷಣ ಸಿಐಡಿಗೆ ಕೊಟ್ಟಿದ್ದೇವೆ. ಸಿಐಡಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಯಾರೇ ತಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಆರೋಪಿಗಳ ಬಂಧನ: ಹುಬ್ಬಳ್ಳಿ ಗಲಾಟೆ ಪ್ರಕರಣದಲ್ಲಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದೇವೆ. ಪ್ರಕರಣದ ತನಿಖೆಯಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ?, ಯಾವ ನಾಯಕರು ಇದ್ದಾರೆ?, ಎಲ್ಲವೂ ತನಿಖೆಯಲ್ಲಿ ಗೊತ್ತಾಗಲಿದೆ. ಯಾರು ತಪ್ಪಿತಸ್ಥರಿದ್ದಾರೋ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:ಕರ್ನಾಟಕ ಇದನ್ನು ಸಹಿಸೋದಿಲ್ಲ, ಇದಕ್ಕೆ ಮತ್ತೆ ಬೇರೆ ರೀತಿಯ ರಾಜಕೀಯ ಬಣ್ಣ ಬಳಿಯೋದು ಬೇಡ : ಸಿಎಂ

Last Updated :Apr 18, 2022, 12:26 PM IST

ABOUT THE AUTHOR

...view details